ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡಿ ಕೃಷ್ಣಾಷ್ಟಮಿಯ ಸಂಭ್ರಮದಲ್ಲಿ ಭಾಗಿಯಾದ ಸ್ಪೀಕರ್ ಯು.ಟಿ.ಖಾದರ್

ಉಡುಪಿಯ ಶ್ರೀಕೃಷ್ಣ ಮಠಕ್ಕೆ ಸ್ಪೀಕರ್ ಯು.ಟಿ.ಖಾದರ್ ಭೇಟಿ ನೀಡಿ ಕೃಷ್ಣಾಷ್ಟಮಿಯ ಸಂಭ್ರಮದಲ್ಲಿ ಭಾಗಿಯಾದರು.

ಮಠದೊಳಗೆ ಭೇಟಿ ನೀಡಿದ ಯು.ಟಿ.ಖಾದರ್ ಅವರನ್ನು ಸತ್ಯನಾರಾಯಣ ಭಟ್ ಮತ್ತು ಸಮಿತಿಯವರು ಶಾಲು ಹೊದಿಸಿ ಸ್ವಾಗತಿಸಿದರು. ಪ್ರಸಾದವನ್ನು ನೀಡಿ ಹರಸಿದರು.

ಬುಧವಾರ ಬೆಳಿಗ್ಗೆ ಬೆಂಗಳೂರು ಕಾರ್ಯಕ್ರಮ ಮುಗಿಸಿ ಮಂಗಳೂರಿಗೆ ಬಂದು ತನ್ನ ಕ್ಷೇತ್ರದಲ್ಲಿ ವಿವಿಧೆಡೆ ಕೃಷ್ಣಾಷ್ಟಮಿ, ಮೊಸರು ಕುಡಿಕೆ ಕಾರ್ಯಕ್ರಮದಲ್ಲಿದ್ದು ನಂತರ ಉಡುಪಿಯ ಕಡಿಯಾಲಿನಲ್ಲಿ ಪ್ರಸಾದ್ ಕಾಂಚನ್ ನೇತೃತ್ವದಲ್ಲಿ ಶಶಿರಾಜ್ ಕುಂದರ್ ಮತ್ತು ತಂಡದಿಂದ ಟೈಗರ್ ಫ್ರೆಂಡ್ಸ್‍ನ ಹುಲಿವೇಷ ಪ್ರದರ್ಶನ ಸ್ಪರ್ಧೆಯಲ್ಲಿ ಪಾಲ್ಗೊಂಡು ಹಿಂತಿರುಗುವಾಗ ಹಿತೈಷಿಗಳ ಕೋರಿಕೆ ಮೇರೆಗೆ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದರು.

ಸ್ಪೀಕರ್ ಅವರೊಂದಿಗೆ ಕೌನ್ಸಿಲರ್ ಭಾಸ್ಕರ ರಾವ್ ಕಿದಿಯೂರ್, ರಮೇಶ್ ಕಾಂಚನ್, ಮುನಿಯಾಲ ಉದಯಕುಮಾರ್ ಶೆಟ್ಟಿ, ಮುಸ್ತಫ ಹರೇಕಳ, ಬದ್ರುದ್ದೀನ್ ಜೊತೆಗಿದ್ದರು.

Related Posts

Leave a Reply

Your email address will not be published.