ಉಡುಪಿ: ಅಕ್ರಮ ಮರಳುಗಾರಿಕೆ ವಿರುದ್ಧ ಗ್ರಾಮಸ್ಥರಿಂದ ತರಾಟೆ

ಸದ್ಯ ಉಡುಪಿ ಜಿಲ್ಲೆಯಲ್ಲಿ ಮರಳು ಗಣಿಗಾರಿಕೆ ಸಂಪೂರ್ಣ ಬಂದ್ ಆಗಿದ್ದು, ಅಧಿಕೃತ ಮರಳು ಗಣಿಗಳು ಮಾತ್ರ ಕಾರ್ಯಚರಣೆ ಮಾಡುತ್ತಿವೆ. ಇಂತಹ ಸಂದರ್ಭದಲ್ಲೂ ಕೂಡ ಅಕ್ರಮ ಮರಳು ಗಣಿಗಾರಿಕೆಗೆ ಸಂಬಂಧಿಸಿದ ವಿಡಿಯೋ ಒಂದು ವೈರಲ್ ಆಗಿದೆ.

ಕುಂದಾಪುರ ತಾಲೂಕು ಬೇಳೂರು ಗ್ರಾಮ ಪಂಚಾಯತ್ ವತಿಯಿಂದ ನಡೆಯುತ್ತಿರುವ ಸಕ್ರಮ ಮರುಳುಗಾರಿಕೆಯನ್ನ ದುರುಪಯೋಗ ಪಡಿಸಿಕೊಂಡ ಕೆಲ ಪಂಚಾಯತ್ ಸದಸ್ಯರು ತಮ್ಮ ರಾಜಕೀಯ ಪ್ರಭಾವ ಬಳಸಿ ಅಕ್ರಮವಾಗಿ ಮರಳುಗಾರಿಕೆ ಮಾಡುತ್ತಿರುವ ವಿವರ ವಿಡಿಯೋ ದಲ್ಲಿ ಕಂಡು ಬಂದಿದೆ.

ಗಣಿ ಇಲಾಖೆಯ ನಿಯಮಗಳನ್ನು ಗಾಳಿಗೆ ತೂರಿ ಪಕ್ಕದ ವಡ್ಡರ್ಸೆ ಗ್ರಾಮದಲ್ಲಿ ಮರಳು ಗಣಿ ನಿರ್ಮಾಣ ಮಾಡಿ ಮರಳುಗಾರಿಕೆ ನಡೆಸುತ್ತಿದೆ ಎಂದು ಆರೋಪಿಸಲಾಗಿದೆ. ಅಕ್ರಮ ಮರಳುಗಾರಿಕೆ ಬಗ್ಗೆ ಸ್ಥಳೀಯರು ಜಿಲ್ಲಾಧಿಕಾರಿಗಳು, ಗಣಿ ಇಲಾಖೆಗೆ ಅನೇಕ ಬಾರಿ ಮನವಿ ಮಾಡಿದ್ದರು ಯಾವುದೇ ಪ್ರಯೋಜನವಾಗದಿದ್ದ ಹಿನ್ನಲೆಯಲ್ಲಿ ಬೇಸತ್ತ ಜನರು ಪಿಡಿಓ ಮತ್ತು ಗ್ರಾಮ ಪಂಚಾಯತ್ ಸದಸ್ಯರನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಮರಳು ಗಣಿಗಾರಿಕೆ ವಿಚಾರವಾಗಿ ಪಂಚಾಯತ್ ಸದಸ್ಯರು, ಪಿಡಿಓ ಹಾಗೂ ಗ್ರಾಮಸ್ಥರ ನಡುವೆ ನಡೆದ ಚಕಮಕಿ ವಿಡಿಯೊ ವೈರಲ್ ಆಗಿದೆ.

Related Posts

Leave a Reply

Your email address will not be published.