ಅಂಗವೈಕಲ್ಯ ಮೆಟ್ಟಿನಿಂತು ಇತರರಿಗೆ ಸ್ಫೂರ್ತಿಯಾದ ಅಣ್ಣ-ತಂಗಿ..!
ಸಾಧನೆಗೆ ಅಸಾಧ್ಯವಾದುದು ಯಾವುದೂ ಇಲ್ಲ. ಆದರೆ, ಸಾಧಿಸಲು ಮನೋಬಲ ಆತ್ಮವಿಶ್ವಾಸ ದೃಢವಾದ ನಂಬಿಕೆ ಇರಬೇಕು ಎಂಬುದಕ್ಕೆ ಈ ಇಬ್ಬರು ಸಹೋದರ-ಸಹೋದರಿಯರು ಸಾಕ್ಷಿಯಾಗಿದ್ದು, ತಮ್ಮ ಸಾಧನೆ ಮೂಲಕ ಸ್ಫೂರ್ತಿ ನೀಡುತ್ತಿದ್ದಾರೆ. ಉಡುಪಿ ಮೂಲದ ಗಣೇಶ್ ಕುಲಾಲ್ ಪಂಜಿಮಾರ್ ಮತ್ತು ಅವರ ಸಹೋದರಿ ಸುಮಾ ಪಂಜಿಮಾರ್ ತಮ್ಮ ಪೇಟಿಂಗ್ ಮೂಲಕ ಸಾಧನೆ ಮಾಡುತ್ತಿದ್ದು, ಇತರರಿಗೆ ಪ್ರೇರಣೆ ನೀಡುತ್ತಿದ್ದಾರೆ. ಗಣೇಶ್ ಕುಲಾಲ್ ಪಂಜಿಮಾರ್ ಮತ್ತು ಸುಮಾ ಪಂಜಿಮಾರ್ ಇಬ್ಬರು ಮೂಳೆಗಳನ್ನು ದುರ್ಬಲಗೊಳಿಸುವ ಕಾಯಿಲೆಯಿಂದ ಬಳುತ್ತಿದ್ದಾರೆ.
ತಮಗಿರುವ ಅಂಗವೈಕಲ್ಯವನ್ನು ಲೆಕ್ಕಸದ ಇವರು ಕಲೆಯಲ್ಲಿ ತಮ್ಮ ಜೀವನವನ್ನು ತೊಡಗಿಸಿಕೊಂಡಿದ್ದು, ಸಾಧನೆಗೆ ಅಸಾಧ್ಯವಾದುದು ಯಾವುದೂ ಇಲ್ಲ ಎಂಬುದನ್ನು ತೋರಿಸಿಕೊಡುತ್ತಿದ್ದಾರೆ.ಗಣೇಶ್ ಅವರು ಯೂಟ್ಯೂಬ್ ವೀಡಿಯೊಗಳನ್ನು ನೋಡುವ ಮೂಲಕ ಪೇಟಿಂಗ್ ಎಂಬ ಕಲೆಯನ್ನು ಕಲಿತುಕೊಂಡಿದ್ದು, ಈ ವರೆಗೂ 700ಕ್ಕೂ ಹೆಚ್ಚು ರೇಖಾಚಿತ್ರ ಹಾಗೂ ವರ್ಣರಂಜಿತ ಚಿತ್ರಗಳನ್ನು ರಚಿಸಿದ್ದಾರೆ. ಈ ಚಿತ್ರಗಳನ್ನು ನಮ್ಮ ಪ್ರೀತಿಪಾತ್ರರಿಗೆ ಉಡುಗೊರೆಯಾಗಿ ನೀಡುತ್ತಿದ್ದಾರೆ.