ಉಡುಪಿ ; ಲಂಚ ಪ್ರಕರಣ ಆರೋಪ: ಪೊಲೀಸ್ ಉಪನಿರೀಕ್ಷಕ ಶಂಭುಲಿಂಗಯ್ಯ ಅಮಾನತು
ಕೋಟ ಠಾಣೆ ಉಪನಿರೀಕ್ಷಕರಾಗಿದ್ದು, ಪ್ರಸ್ತುತ ಒಒಡಿ ಮೇಲೆ ಕಾರ್ಕಳದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶಂಭುಲಿಂಗಯ್ಯ ಅವರನ್ನು ಲಂಚ ಪ್ರಕರಣ ಆರೋಪಕ್ಕೆ ಸಂಬಂಧಿಸಿ ಅಮಾನತುಗೊಳಿಸಿರುವುದಾಗಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ಅರುಣ್ ಕುಮಾರ್ ತಿಳಿಸಿದ್ದಾರೆ.
ಅಚ್ಚಾಡಿಯ ಖಾಸಗಿ ಕಾಲೇಜಿನಲ್ಲಿ ಆಡಳಿತ ಮಂಡಳಿಯೊಳಗೆ ಗಲಾಟೆಗೆ ಸಂಬಂಧಿಸಿದಂತೆ ಮಧು ಭಾಸ್ಕರ್ ಹಾಗೂ ಮಹಿಮಾ ಮಧು ಭಾಸ್ಕರ್ ಅವರು ಪರಸ್ಪರ ದೂರು ದಾಖಲಿಸಿಕೊಂಡಿದ್ದರು. ಈ ವಿಚಾರವಾಗಿ ಮಧು ಭಾಸ್ಕರ್ ವಿರುದ್ದ ದೂರು ದಾಖಲಿಸಲು ಹಾಗೂ ಮಹಿಮಾ ವಿರುದ್ದದ ದೂರಿಗೆ ಬಿ ರಿಫೋರ್ಟ್ ನೀಡುವುದಾಗಿ ಆಗ ಠಾಣಾಧಿಕಾರಿಯಾಗಿದ್ದ ಶಂಭು ಲಿಂಗಯ್ಯ ಲಂಚ ಪಡೆದಿದ್ದರು.