ಉಡುಪಿ : ವಿಶ್ವ ಛಾಯಾಗ್ರಹಣ ದಿನ ಕಾರ್ಯಕ್ರಮ

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಉಡುಪಿ ವಲಯ, ಮಲಬಾರ್ ಗೋಲ್ಡ್ & ಡೈಮಂಡ್ಸ್ ಉಡುಪಿ, ರೋಟರಿ ಉಡುಪಿ ರೋಯಲ್ ಜಂಟಿಯಾಗಿ ವಿಶ್ವ ಛಾಯಾಗ್ರಹಣ ದಿನ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಈ ಕಾರ್ಯಕ್ರಮದಲ್ಲಿ ಹಿರಿಯ ಛಾಯಾಗ್ರಾಹಕ ಜಗನ್ನಾಥ ಶೆಟ್ಟಿ ಹಾಗೂ ಚಂದ್ರಶೇಖರ್ ಅಂಬಲಪಾಡಿ ಇವರಿಗೆ ಛಾಯಾ ಪುರಸ್ಕಾರ ನೀಡಿ ಗೌರವಿಸಲಾಯಿತು. ವಿಶ್ವ ಛಾಯಾಗ್ರಹಣ ದಿನದ ಪ್ರಯುಕ್ತ ನಡೆದ ಛಾಯಾಚಿತ್ರ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು ಮತ್ತು ದೇಶದ ಗಡಿ ಕಾಯುವ ಯೋಧ ಬಾಲರಾಜ್ ರವರನ್ನು ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಉಡುಪಿ ರೋಟರಿ ರೋಯಲ್‌ನ ಅಧ್ಯಕ್ಷರಾದ ರೊ| ಬಾಲಕೃಷ್ಣ ಮದ್ದೋಡಿ, “ಛಾಯಾಚಿತ್ರದಲ್ಲಿನ ನೈಪುಣ್ಯ, ವೈಜ್ಞಾನಿಕತೆ ಮತ್ತು ತಾಂತ್ರಿಕತೆ ಹಾಗೂ ಭಾವನಾತ್ಮಕ ಸಂವೇದನಾಶೀಲತೆ ಇವೆಲ್ಲವನ್ನೂ ನಾವು ಗುರುತಿಸಿಕೊಂಡಾಗ ಮಾತ್ರ ಛಾಯಾಗ್ರಣವೆನ್ನುವುದು ಎಷ್ಟು ವಿಶಿಷ್ಟವಾದದ್ದು ಎಂಬ ಅರಿವಾಗುತ್ತದೆ. ಹಾಗಾಗಿ ಛಾಯಾಗ್ರಹಣ ವೃತ್ತಿ ಮಾಡುವ ಎಲ್ಲಾ ಛಾಯಾಗ್ರಾಹಕರು ಅಭಿನಂದನಾರ್ಹರು. ಒಂದು ಕ್ಷಣದ ಸುಂದರ ಛಾಯಾಚಿತ್ರಕ್ಕಾಗಿ ಗಂಟೆಗಟ್ಟಲೆ, ದಿನಗಟ್ಟಲೆ, ವರ್ಷಗಟ್ಟಲೆ ತಾಳ್ಮೆಯಿಂದ ಕಾದು, ಅದನ್ನು ವಿಶಿಷ್ಟ ರೀತಿಯಲ್ಲಿ ನಮಗೆ ಒಪ್ಪಿಸುವ ಛಾಯಾಗ್ರಾಹಕರ ಕಾರ್ಯ ಮೆಚ್ಚುವಂತದ್ದು” ಎಂದು ಪ್ರಶಂಸಿದರು. ಇನ್ನು ಅತಿಥಿಗಳಾದ ಜಿಲ್ಲಾಧ್ಯಕ್ಷ ಆನಂದ ಎನ್ ಕುಂಪಲ ಮಾತನಾಡಿ ನಮ್ಮ ಛಾಯಾಗ್ರಹಣ ಕ್ಷೇತ್ರದಲ್ಲಿ ನಮ್ಮತನವನ್ನು ಕಂಡುಕೊಂಡು, ಸಾಮಾಜಿಕವಾಗಿ ಮುಂದೆ ಬರಬೇಕು ಎಂದರು. ಈ ಸಂದರ್ಭದಲ್ಲಿ ಮಲಬಾರ್ ಗೋಲ್ಡ್ & ಡೈಮಂಡ್ಸ್‌ನ ಹಫೀಜ್ ರೆಹಮನ್, ಸುವರ್ಣ ಕಾರ್ಯದರ್ಶಿ ಪ್ರವೀಣ್ ಕೊರೆಯ ಉಪಸ್ಥಿತರಿದ್ದರು. ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್‌ನ ಉಡುಪಿ ವಲಯಾಧ್ಯಕ್ಷ ಜನಾರ್ದನ್ ಕೊಡವೂರು ಸ್ವಾಗತಿಸಿದರು. ಪ್ರಸ್ತಾವನೆಯ ರೂಪದಲ್ಲಿ ಪೂರ್ಣಿಮಾ ಜನಾರ್ದನ್ ಕವನ ವಾಚಿಸಿದರು. ಕೋಶಾಧ್ಯಕ್ಷ ದಿವಾಕರ ಹಿರಿಯಡ್ಕ ವಂದಿಸಿದರು. ರಾಘವೇಂದ್ರ ಶೇರಿಗಾರ್ನಿ ನಿರೂಪಿಸಿದರು.

Related Posts

Leave a Reply

Your email address will not be published.