ಉಡುಪಿಯಲ್ಲಿ ಬಿಜೆಪಿಯಿಂದ ಪ್ರತಿಭಟನೆ

ಉಡುಪಿಯ ಕಾಲೇಜಿನ ಶೌಚಾಲಯದಲ್ಲಿ ವೀಡಿಯೋ ಚಿತ್ರೀಕರಣ ಪ್ರಕರಣದ ವಿರುದ್ಧ ಇಂದು ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ “ಬೃಹತ್ ಪ್ರತಿಭಟನೆ ಮತ್ತು ಸಮಗ್ರ ತನಿಖೆಗೆ ಹಕ್ಕೊತ್ತಾಯ” ಸಭೆ ನಡೆಸಿದರು.



ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ರವರ ನೇತೃತ್ವದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಕಛೇರಿಯ ಬಳಿಯಿಂದ ಹೊರಟ ಉಡುಪಿ ಸಿಟಿ ಬಸ್ ನಿಲ್ದಾಣದ ಮೂಲಕ ಬನ್ನಂಜೆ ಎಸ್.ಪಿ. ಕಛೇರಿಯ ಬಳಿ ಸಮಾಗಮಗೊಂಡಿತು. ನಂತರ ಪ್ರತಿಭಟನಾ ಸಭೆ ನಡೆಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸಿದರು.