ಉಡುಪಿ: ಬಿಜೆಪಿಯವರಿಂದಲೇ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ-ಗಾಯಾಳು ಅಸ್ಪತ್ರೆಗೆ ದಾಖಲು
ಉಡುಪಿಯ ಜಿಲ್ಲೆಯ ಮುದ್ದೂರು ಎಂಬಲ್ಲಿ ಬಿಜೆಪಿಯವರಿಂದಲೇ ಬಿಜೆಪಿ ಕಾರ್ಯಕರ್ತನ ಮೇಲೆ ಮಾರಾಣಾಂತಿಕ ಹಲ್ಲೆ ನಡೆದಿದ್ದು ಗಂಭೀರ ಗಾಯಗೊಂಡಿರುವ ಬಿಜೆಪಿ ಕಾರ್ಯಕರ್ತ ನೆಂಚಾರು ನಿವಾಸಿ ಪ್ರಭಾಕರ ಪೂಜಾರಿ (51) ಅಜ್ಜರಕಾಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಹಲ್ಲೆ ಮಾಡಲಾಗಿದೆ ಎಂದು ಹೇಳಲಾಗುತ್ತಿದ್ದು ಮೊದಲಿನಿಂದಲೂ ಬಿಜೆಪಿಯ ಕಾರ್ಯಕರ್ತರಾಗಿದ್ದ ಪ್ರ್ರಭಾಕರ ಪೂಜಾರಿ ಕಳೆದ ಬಾರಿ ಸ್ಥಳೀಯ ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್‍ಗೆ ಬೆಂಬಲ ನೀಡಿರುವ ಹಿನ್ನೆಲೆಯಲ್ಲಿ ಈ ಹಲ್ಲೆ ನಡೆಸಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ.
ಸ್ಥಳೀಯ ಬಿಜೆಪಿಯ ಮುಖಂಡರಾದ ಪ್ರತಾಪ್ ಹೆಗ್ಡೆ, ಹರೀಶ್, ದಿನೇಶ್ ಮತ್ತು ಗಣೇಶ್ ಎಂಬವರು ನಂಚಾರು ಹಾಲು ಡೈರಿಗೆ ಹಾಲು ನೀಡಲು ಬಂದಿದ್ದ ಪ್ರಭಾಕರ ಪೂಜಾರಿಯವರನ್ನು ಅಪಹರಿಸಿಕೊಂಡು ಬಿಜೆಪಿ ಮುಖಂಡ ಪ್ರತಾಪ್ ಹೆಗಡೆ ಆಫೀಸಿನಲ್ಲಿ ಬಂಧಿಸಿ ವಿದ್ಯುತ್ ತಂತಿಯಿಂದ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಸಂಜೆಯವರೆಗೂ ಅಕ್ರಮ ಬಂಧನದಲ್ಲಿರಿಸಿ ಹಲ್ಲೆ ನಡೆಸಿದ್ದಾರೆ ಎಂದು ಹೇಳಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.