HomeFresh Newsಉಡುಪಿಯಲ್ಲಿ ಸಂಭ್ರಮದ ಈದ್-ಅಲ್-ಅಧಾ ಆಚರಣೆ

ಉಡುಪಿಯಲ್ಲಿ ಸಂಭ್ರಮದ ಈದ್-ಅಲ್-ಅಧಾ ಆಚರಣೆ

ಉಡುಪಿ : ಕರಾವಳಿಯ ಮುಸ್ಲಿಮರು ಇಂದು ಅತ್ಯಂತ ಸಡಗರ, ಸಂಭ್ರಮದಿಂದ ಈದ್-ಅಲ್-ಅಧಾ ಆಚರಿಸುತ್ತಿದ್ದು, ಹಲವೆಡೆ ಮುಸ್ಲಿಮರಿಂದ ಸಾಮೂಹಿಕ ಪ್ರಾರ್ಥನೆ ನಡೆಯುತ್ತಿದೆ. ಉಡುಪಿ ನಗರದ ಜುಮಾ ಮಸೀದಿಯಲ್ಲಿ ಸಾಮೂಹಿಕ ನಮಾಝ್, ಈದ್ ಸಂದೇಶ, ಪ್ರವಚನ, ಈದ್ ಶುಭಾಶಯ, ನೆರೆಮನೆ ಹಾಗೂ ಸಂಬಂಧಿಕರ ಮನೆಗೆ ಸೌಹಾರ್ದ ಭೇಟಿಯ ಮೂಲಕ ಹಬ್ಬಕ್ಕೆ ಸಂಭ್ರಮ ತಂದರು. ಇನ್ನೂ ಕೆಲವೆಡೆ ಮಳೆಯ ನಡುವೆ ಪ್ರಾರ್ಥನೆ ಸಲ್ಲಿಸಲಾಗಿದೆ. ಈ ನಡುವೆ ಅಲ್ಲಲ್ಲಿ ಮಳೆಯಾಗುತ್ತಿದ್ದು, ಇದನ್ನು ಲೆಕ್ಕಿಸಿದೆ ಮುಸ್ಲಿಮರು ಪ್ರಾರ್ಥನೆ ಸಲ್ಲಿಸಿದ್ದಾರೆ. ಈದ್ ನಮಾಝ್-ಖುತ್ಬಾದ ಬಳಿಕ ದಫನ ಭೂಮಿಗೆ ತೆರಳಿ ಅಗಲಿದ ಕುಟುಂಬದ ಸದಸ್ಯರ ಮಗ್ಫಿರತ್‌ಗಾಗಿ ಪ್ರಾರ್ಥಿಸಿದರು. ಹಾಗೇ ಕುಟುಂಬಸ್ಥರು, ಸ್ನೇಹಿತರು, ಸಮೀಪದ ನಿವಾಸಿಗಳ ಮನೆಗೆ ತೆರಳಿ ಈದ್ ಶುಭಾಶಯ ಕೋರಿದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments