ಉಡುಪಿ : ನೇತ್ರ ಜ್ಯೋತಿ ಕಾಲೇಜು ವಿದ್ಯಾರ್ಥಿಗಳಿಂದ ತುರ್ತು ಜೀವ ರಕ್ಷಕ ಹಾಗೂ ರಕ್ತ ಗುಂಪು ಪರೀಕ್ಷೆ ಕಾರ್ಯಕ್ರಮ
ಉಡುಪಿಯ ಪ್ರತಿಷ್ಠಿತ ನೇತ್ರ ಜ್ಯೋತಿ ಕಾಲೇಜು ವಿದ್ಯಾರ್ಥಿಗಳಿಂದ ದಿನಾಂಕ 30 ನೇ ಬುಧವಾರದಂದು
ಕುಂದಾಪುರ ಬಿದ್ಕಲ್ ಕಟ್ಟೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳಿಗೆ ಸಿ ಪಿ ಆರ್ ಹಾಗೂ ರಕ್ತದ ಗುಂಪು ಪರೀಕ್ಷೆ
ನಡೆಸಲಾಯಿತು.

ಹೃದಯಸ್ತoಭನ ಅಥವಾ ಉಸಿರಾಟ ನಿಂತು ಹೋದಾಗ ರೋಗಿಯನ್ನು ಉಳಿಸಲು ಮಾಡುವ ತುರ್ತು ಚಿಕಿತ್ಸೆ ಹಾಗೂ ವಿದ್ಯಾರ್ಥಿಗಳ ರಕ್ತದ ಗುಂಪು ಪರೀಕ್ಷೆ ಕಾರ್ಯಕ್ರಮವನ್ನು ಯಶಸ್ವೀಯಾಗಿ ನಡೆಸಿ ಸಮಾಜಮುಖಿ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡರು.

ಕುಂದಾಪುರ ಬಿದ್ಕಲ್ ಕಟ್ಟೆಯ ಕರ್ನಾಟಕ ಪಬ್ಲಿಕ್ ಸ್ಕೂಲಿನ ಸುಮಾರು 400 ವಿದ್ಯಾರ್ಥಿಗಳು ಈ ಕಾರ್ಯಕ್ರಮದ ಉಪಯೋಗವನ್ನು ಪಡೆದುಕೊಂಡರು.


ಶಾಲೆಯ ಪ್ರಾಚಾರ್ಯರು ಹಾಗೂ ಶಿಕ್ಷಕರು ಮತ್ತು ಸಿಬ್ಬಂದಿಗಳು ಸಹಕರಿಸಿದರು.
ಕಾಲೇಜಿನ ವತಿಯಿಂದ ಉಪನ್ಯಾಸಕಿಯಾರಾದ ಸ್ವಾತಿ, ಶಹನಾಜ್, ಕಾಲೇಜು ಕಾರ್ಡಿನೆಟರ್ ನಾಗರಾಜ್ ಮೆಂಡನ್ ಹಾಗೂ 20 ವಿದ್ಯಾರ್ಥಿಗಳು ಕಾರ್ಯಕ್ರಮವನ್ನು ನಡೆಸಿಕೊಟ್ಟರು.


















