ಉಡುಪಿ: ಮಾಜಿ ಸಚಿವ ಪ್ರಮೋದ್ ಮಧ್ವರಾಜ್‌ಗೆ ಅನಾರೋಗ್ಯ – ಆಸ್ಪತ್ರೆಗೆ ದಾಖಲು

ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಅನಾರೋಗ್ಯದಿಂದ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಜ್ವರದಿಂದ ಬಳಲುತ್ತಿದ್ದ 55ರ ಹರೆಯದ ಪ್ರಮೋದ್ ಮಧ್ವರಾಜ್ ಅವರನ್ನು ಮಂಗಳವಾರ ರಾತ್ರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶ್ವಾಸಕೋಶದ ಸೋಂಕು ನ್ಯುಮೋನಿಯಾ ಕಾಣಿಸಿಕೊಂಡಿದ್ದು ವೈದ್ಯರು ಸಕಾಲಿಕ ಚಿಕಿತ್ಸೆ ನೀಡಿದ್ದಾರೆ. ಚಿಕಿತ್ಸೆಗೆ ಸ್ಪಂದಿಸಿದ್ದು ಇನ್ನೆರಡು ದಿನಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

add - BDG

Related Posts

Leave a Reply

Your email address will not be published.