ಉಡುಪಿ ಗ್ಯಾಂಗ್ ವಾರ್ ಪ್ರಕರಣ: ಮತ್ತೆ ಮೂವರು ಆರೋಪಿಗಳು ವಶಕ್ಕೆ

ಉಡುಪಿ-ಮಣಿಪಾಲ ರಾಷ್ಟ್ರೀಯ ಹೆದ್ದಾರಿಯ ಕುಂಜಿಬೆಟ್ಟು ಎಂಬಲ್ಲಿ ಮೇ 18ರಂದು ನಡು ರಸ್ತೆಯಲ್ಲಿಯೇ ನಡೆದ ಗ್ಯಾಂಗ್‌ವಾರ್ ಗೆ ಸಂಬಂಧಿಸಿ ಮತ್ತೆ ಮೂವರು ಆರೋಪಿಗಳನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಬಂಧಿತರ ಸಂಖ್ಯೆ ಆರಕ್ಕೇರಿದೆ.



ಈ ಪ್ರಕರಣದಲ್ಲಿ ಪ್ರಮುಖ ಆರೋಪಿ ಕಾಪು ಕೊಂಬಗುಡ್ಡೆ ಮೂಲದ ಆಶಿಕ್ (26), ತೋನ್ಸೆ ಹೂಡೆಯ ರಾಕೀಬ್ (21) ಹಾಗೂ ಮೇ 25ರಂದು ಸಕ್ಲೈನ್ (26) ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಇದೀಗ ಮತ್ತೆ ಮೂವರನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದಾರೆ. ಮಜೀದ್, ಅಲ್ಫಾಜ್ ,ಶರೀಫ್ ಬಂಧಿತರು. ಆರೋಪಿಗಳ ಸ್ಪಷ್ಟ ಚಿತ್ರಣ ಪಡೆಯಲು ಪೊಲೀಸರು ಕಾರ್ಯಾಚರಣೆ ಮುಂದುವರೆಸಿದ್ದಾರೆ.