HomeFresh Newsಉಡುಪಿ:ನೂತನ ಶಾಲಾ ಕೊಠಡಿಗಳ ಉದ್ಘಾಟನಾ ಸಮಾರಂಭ

ಉಡುಪಿ:ನೂತನ ಶಾಲಾ ಕೊಠಡಿಗಳ ಉದ್ಘಾಟನಾ ಸಮಾರಂಭ

ಉಡುಪಿಯ ಕೆಳಾರ್ಕಳಬೆಟ್ಟುವಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವರ್ಣ ಜ್ಯುವೆಲ್ಲರ್ಸ್ನ ಮಾಲಕರ ವತಿಯಿಂದ ಸುಮಾರು ₹45 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಎರಡು ನೂತನ ಶಾಲಾ ಕೊಠಡಿಗಳು ಹಾಗೂ ಬಾಲಕ ಮತ್ತು ಬಾಲಕಿಯರಿಗಾಗಿ ಪ್ರತ್ಯೇಕವಾಗಿ ನಿರ್ಮಿಸಲಾದ ಎರಡು ಶೌಚಾಲಯಗಳ ಉದ್ಘಾಟನಾ ಸಮಾರಂಭವು ಇಂದು (31-10-2026ರಂದು) ವಿಜೃಂಭಣೆಯಿಂದ ನಡೆಯಿತು.

ಶಾಲೆಗೆ ಸುಸಜ್ಜಿತ ಕೊಠಡಿಗಳು ಹಾಗೂ ಶೌಚಾಲಯಗಳನ್ನು ನಿರ್ಮಿಸಿಕೊಡುವ ಮೂಲಕ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಮತ್ತು ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಸಹಕರಿಸಿದ ದಾನಿಗಳ ಕಾರ್ಯವನ್ನು ಈ ಸಂದರ್ಭದಲ್ಲಿ ಎಲ್ಲರೂ ಶ್ಲಾಘಿಸಿದರು.

ಸಿಆರ್‌ಸಿ ಫಂಡ್ ಹಾಗೂ ಗುಜ್ಜಾಡಿ ರಾಮದಾಸ್ ನಾಯಕ್ ಅವರ ಪುತ್ರ ದೀಪಕ್ ನಾಯಕ್ ಮತ್ತು ಅವರ ಪತ್ನಿ ಪ್ರಿಯಾಂಕಾ ದೀಪಕ್ ನಾಯಕ್ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಜರುಗಿತು.

ಕಾರ್ಯಕ್ರಮದಲ್ಲಿ ಎಸ್‌ಡಿಎಂಸಿ ಅಧ್ಯಕ್ಷರು, ಸುರೇಶ್ ನಾಯಕ್ ಹಿತೈಷಿಸಮಿತಿಯ ಅಧ್ಯಕ್ಷರಾದ ಶ್ರೀ ರಮೇಶ್ ಸಮಗ, ವಿಷ್ಣುಮೂರ್ತಿ ದೇವಸ್ಥಾನದ ಅಧ್ಯಕ್ಷರಾದ ಶ್ರೀ ಸದಾನಂದ ನಾಯಕ್ ಹಾಗೂ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿಯಾದ ಶ್ರೀಮತಿ ಪುಷ್ಪ ಮತ್ತು ಶಿಕ್ಷಕಿ ಶ್ರೀಮತಿ ಸಬಿತ ಉಪಸ್ಥಿತರಿದ್ದರು…

ಈ ಸಂದರ್ಭದಲ್ಲಿ ಎಸ್‌ಡಿಎಂಸಿ ಸರ್ವ ಸದಸ್ಯರು, ಹಿತೈಷಿ ಸಮಿತಿಯ ಸದಸ್ಯರು, ಪೋಷಕರು, ಶಿಕ್ಷಕರು ಹಾಗೂ ಊರಿನ ಗಣ್ಯರು ಭಾಗವಹಿಸಿ ಕಾರ್ಯಕ್ರಮಕ್ಕೆ ಮೆರುಗು ನೀಡಿದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments