HomeFresh Newsಉಡುಪಿ: ಮಾ.5ಕ್ಕೆ ಪರಿಯಾಳ ಸಮಾಜ ಸಮುದಾಯ ಭವನ ಉದ್ಘಾಟನೆ

ಉಡುಪಿ: ಮಾ.5ಕ್ಕೆ ಪರಿಯಾಳ ಸಮಾಜ ಸಮುದಾಯ ಭವನ ಉದ್ಘಾಟನೆ

ಉಡುಪಿ: ಜಿಲ್ಲಾ ಪರಿಯಾಳ ಸಮಾಜ ಸುಧಾರಕ ಸಂಘದ ವತಿಯಿಂದ ಅಂದಾಜು 75 ಲಕ್ಷ ರೂ. ವೆಚ್ಚದಲ್ಲಿ ಉಚ್ಚಿಲದಲ್ಲಿ ನಿರ್ಮಿಸಲಾದ ಪರಿಯಾಳ ಸಮಾಜ ಸಮುದಾಯ ಭವನದ ಉದ್ಘಾಟನೆಯು ಮಾ.5ರಂದು ಉಚ್ಚಿಲದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಯು.ಶಂಕರ ಸಾಲ್ಯಾನ್ ತಿಳಿಸಿದ್ದಾರೆ. ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 15 ಲಕ್ಷರೂ. ನೆರವು ದೊರಕಿದ್ದು, ಉಳಿದಂತೆ ದಾನಿಗಳಿಂದ ಸಂಗ್ರಹಿಸಿ ಕಟ್ಟಡ ನಿರ್ಮಿಸಲಾಗಿದೆ. ಕಟ್ಟಡವನ್ನು ಸಂಪೂರ್ಣವಾಗಿ ಸಜ್ಜುಗೊಳಿಸಲು ಇನ್ನೂ 15 ಲಕ್ಷ ರೂ. ಅಗತ್ಯವಿದೆ ಎಂದು ತಿಳಿಸಿದರು.

ಪರಿಯಾಳ ಸಮುದಾಯ ಭವನವನ್ನು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಲಿದ್ದಾರೆ. ಕೇಮಾರು ಸಾಂದೀಪನಿ ಸಾಧನಾಶ್ರಮದ ಶ್ರೀಈಶ ವಿಠಲದಾಸ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಮಾಜಿ ಶಾಸಕ ಲಾಲಾಜಿ ಆರ್.ಮೆಂಡನ್, ಶಾಸಕ ಯಶ್ವಾಲ್ ಸುವರ್ಣ, ಬಡಾ ಗ್ರಾಪಂ ಅಧ್ಯಕ್ಷ ಶಿವಕುಮಾ‌ರ್ ಮೆಂಡನ್, ಮಾಜಿ ಶಾಸಕ ವಿನಯಕುಮಾ‌ರ್ ಸೊರಕೆ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಜಿ.ಶಂಕ‌ರ್ ಫ್ಯಾಮಿಲಿ ಟ್ರಸ್ಟ್‌ನ ಡಾ.ಜಿ.ಶಂಕರ್ ಹಾಗೂ ಇತರರು ಭಾಗವಹಿಸಲಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ಸಂಘದ ಕಾರ್ಯದರ್ಶಿ ಸುಧಾಕರ ಸಾಲ್ಯಾನ್, ಕೋಶಾಧಿಕಾರಿ ಶೇಖರ್ ಸಾಲ್ಯಾನ್, ಮಹಿಳಾ ಘಟಕದ ಅಧ್ಯಕ್ಷೆ ವಸಂತಿ ಭಾಸ್ಕರ್, ಸಂದೀಪ ಸಾಲ್ಯಾನ್‌ ಹಾರಾಡಿ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments