ಉಡುಪಿ: ಜಯಲಕ್ಷ್ಮೀ ಸಿಲ್ಕ್ಸ್ ನಲ್ಲಿ ಮಿಸ್ ಫೈರಿಂಗ್: ಒಬ್ಬರಿಗೆ ಗಾಯ, ಪೊಲೀಸ್ ದೌಡು
ಉಡುಪಿಯ ಬನ್ನಂಜೆಯಲ್ಲಿರುವ ಜಯಲಕ್ಷ್ಮೀ ಸಿಲ್ಕ್ಸ್ ನಲ್ಲಿ ಮಿಸ್ ಫೈರಿಂಗ್ ಆಗಿದ್ದು, ಇದರಿಂದ ಓರ್ವ ಸಿಬ್ಬಂದಿ ಗಾಯಗೊಂಡ ಘಟನೆ ನಡೆದಿದೆ.
ಬಟ್ಟೆ ಮಳಿಗೆಯಲ್ಲಿ ಯಾರೋ ಬಿಟ್ಟು ಹೋಗಿದ್ದ ಗನ್ ಪತ್ತೆಯಾಗಿತ್ತು. ಅದನ್ನು ಎತ್ತಿಕೊಂಡ ಸಿಬ್ಬಂದಿ ಆಪರೇಟ್ ಮಾಡಿ ಪರೀಕ್ಷಿಸಲು ಮುಂದಾಗಿದ್ದಾರೆ. ಈ ವೇಳೆ ಅಲ್ಲೇ ಇದ್ದ ಇನ್ನೋರ್ವ ಸಿಬ್ಬಂದಿಗೆ ಗುಂಡು ತಗುಲಿದ್ದು, ಅವರನ್ನು ಕೂಡಲೇ ಉಡುಪಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ಉಡುಪಿ ನಗರ ಪೊಲೀಸರು ದೌಡಾಯಿಸಿದ್ದು, ಗನ್ ವಶಕ್ಕೆ ಪಡೆದುಕೊಂಡಿದ್ದಾರೆ. ಗನ್ ಯಾರದ್ದು, ಮಳಿಗೆಯಲ್ಲಿ ತಂದಿಟ್ಟಿದ್ದು ಯಾರು ಎನ್ನುವ ಕುರಿತು ತನಿಖೆ ನಡೆಸುತ್ತಿದ್ದಾರೆ.