ಉಡುಪಿ ಜಿಲ್ಲಾ ಫಲಾನುಭವಿಗಳ ಬೃಹತ್ ಸಮಾವೇಶ

ರಾಷ್ಟ್ರೀಯ ಹೆದ್ದಾರಿ 66ರ ಬಳಿಯ ಕಟಪಾಡಿ ಗ್ರೀನ್ ವ್ಯಾಲಿಯಲ್ಲಿ ಉಡುಪಿ ಜಿಲ್ಲಾ ಮಟ್ಟದ ಫಲಾನುಭವಿಗಳ ಸಮಾವೇಶವು ಉದ್ಘಾಟನೆ ಗೊಂಡಿತು. ಸಮಾವೇಷವನ್ನು ಜಿಲ್ಲಾ ಉಸ್ತುವಾರಿ ಹಾಗೂ ಮೀನುಗಾರಿಕಾ ಸಚಿವ ಎಸ್ ಅಂಗಾರ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲೆಯ ಒಟ್ಟು 155 ಗ್ರಾಪಂನ ವಿವಿಧ ಯೋಜನೆಗಳಡಿ ಸುಮಾರು 15 ಸಾವಿರ ಫಲಾನುಭವಿಗಳು ಪಾಲ್ಗೊಂಡಿದ್ದರು. ಸಮಾವೇಶದಲ್ಲಿ ಕಾಪು ವಿಧಾನ ಸಭಾ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ಹೆಚ್ಚಿನ ಸಂಖ್ಯೆಯ 94ಸಿ/94ಸಿಸಿ ಹಕ್ಕು ಪತ್ರಗಳು, ವಿವಿಧ ಪಿಂಚಣಿ ಸೌಲಭ್ಯ, ಕಾರ್ಮಿಕ ಇಲಾಖೆ, ಬಿಪಿಎಲ್ ಪಡಿತರ ಚೀಟಿ, ವಸತಿ ಯೋಜನೆ ಮನೆ ಮಂಜೂರಾತಿ ಪತ್ರ ಸೇರಿದಂತೆ ವಿವಿಧ ಇಲಾಖೆಗಳಡಿ ಸೌಲಭ್ಯವನ್ನು ಅರ್ಹ ಫಲಾನುಭವಿಗಳಿಗೆ ವಿತರಿಸಲಾಯಿತು. ಕೃಷಿ ಸಮ್ಮಾನ್, ಉಜ್ವಲ, ವಿದ್ಯಾ ಸಿರಿ ಯೋಜನೆಗಳ ಸಹಿತ ಕೇಂದ್ರ ಮತ್ತು ರಾಜ್ಯ ಸರಕಾರಗಳ ಜನಪ್ರಿಯ ಯೋಜನೆಗಳ ಫಲಾನುಭವಿಗಳ ಸಮಾವೇಶ ನಡೆಯಿತು. ಕಾಪು ಶಾಸಕ ಲಾಲಾಜಿ ಆರ್, ಮೆಂಡನ್ ಅಧ್ಯಕ್ಷತೆ ವಹಿಸಿದ್ದರು. ಕೇಂದ್ರ ಸಚಿವೆ ಶೋಬಾ ಕರಂದಾಜೆ, ಸಚಿವ ಸುನೀಲ್ ಕುಮಾರ್, ಶಾಸಕರಾದ ಸುಕುಮಾರ್ ಶೆಟ್ಟಿ, ರಘುಪತಿ ಭಟ್, ಉದಯಕುಮಾರ್ ಶೆಟ್ಟಿ, , ಅಪರ ಜಿಲ್ಲಾಧಿಕಾರಿ ವೀಣಾ ಎಸ್, ಕಟಪಾಡಿ ಗ್ರಾಪಂ ಅಧ್ಯಕ್ಷೆಇಂದಿರಾ ಎಸ್ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು.
