ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ : ಹಿರಿಯರೆಡೆಗೆ ಸಾಹಿತ್ಯದ ನಡಿಗೆ

ಉಡುಪಿ ಜಿಲ್ಲೆ : ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ ಹಾಗೂ ಉಡುಪಿ ತಾಲೂಕು ಘಟಕದಿಂದ ಹಿರಿಯರೆಡೆಗೆ ಸಾಹಿತ್ಯದ ನಡಿಗೆ ಕಾರ್ಯಕ್ರಮ ಮಣಿಪಾಲದಲ್ಲಿ ಮೇ 26 ರಂದು ನಡೆಯಿತು. ಈ ಕಾರ್ಯಕ್ರಮದಲ್ಲಿ ಸರ್ಕಾರಿ ಕೆಲಸದಲ್ಲಿ ಇಂಜಿನಿಯರ್ ಆಗಿ ಸೇವೆ ಸಲ್ಲಿಸುತ್ತ, ಕನ್ನಡ ನಾಡು ನುಡಿ ಸಂಸ್ಕೃತಿಗೆ ಅನನ್ಯ ಸೇವೆ ಸಲ್ಲಿಸಿದ 91 ವರ್ಷದ ಹಿರಿಯರಾದ ವಿಠಲ ರಾವ್ ಗಂಭೀರ್ ಅವರನ್ನು ಅವರ ಸ್ವಗೃಹ ಮಣಿಪಾಲದಲ್ಲಿ ಗೌರವಿಸಲಾಯಿತು.

ಎಂಟು ವಿವಿಧ ವಾದ್ಯಗಳನ್ನು ನುಡಿಸಬಲ್ಲ ಇವರು ಸುಮಾರು 50ಕ್ಕೂ ಹೆಚ್ಚು ಪುಸ್ತಕಗಳನ್ನು ಬರೆದಿದ್ದಾರೆ ಹಾಗೂ ಜ್ಯೋತಿಷ್ಯ ಶಾಸ್ತ್ರದಲ್ಲೂ ಪರಿಣಿತರಾಗಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗರು, ವಿಠಲ್ ರಾವ್ ಅವರನ್ನು ಗೌರವಿಸುವುದು ನಮ್ಮ ಭಾಗ್ಯ ಎಂದರು.

ಈ ಸಮಾರಂಭದಲ್ಲಿ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲಾ ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ, ಹಿರಿಯರಾದ ಉಪೇಂದ್ರ ಸೋಮಯಾಜಿ, ಭುವನಪ್ರಸಾದ್ ಹೆಗ್ಡೆ, ಚಂದ್ರಶೇಖರ್ ನಾವಡ ನರಸಿಂಹಮೂರ್ತಿ, ಕಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್.ಪಿ, ಗೌರವ ಕಾರ್ಯದರ್ಶಿ ಜನಾರ್ದನ ಕೊಡವೂರು, ಸಂಘಟನಾ ಕಾರ್ಯದರ್ಶಿ ರಾಘವೇಂದ್ರ ಪ್ರಭು ಕರ್ವಾಲು ಹಾಗೂ ವಿಠಲ್ ರಾವ್ ಅವರ ಮಗ ಗಂಭೀರ್ ರಾಮಚಂದ್ರರಾವ್ ಉಪಸ್ಥಿತರಿದ್ದರು.

Related Posts

Leave a Reply

Your email address will not be published.