ಉಡುಪಿ:ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ ಘಟಕದ ವತಿಯಿಂದ ಮಣಿಪಾಲ ಟೈಗರ್ ಸರ್ಕಲ್ ನಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಜಾಥಾ ಕಾರ್ಯಕ್ರಮ

ಮಣಿಪಾಲ ಟೈಗರ್ ಸರ್ಕಲ್ ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಉಡುಪಿ ಜಿಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ತೆಗೆಯುವುದು ಮತ್ತು ಸಾಗಾಣಿಕೆಗೆ ನಿರ್ಬಂಧ ಹೇರಿರುವ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ ಘಟಕದ ಅ ರಾ ಪ್ರಭಾಕರ ಪೂಜಾರಿ ಮುಂದಾಳತ್ವದಲ್ಲಿ ಇಂದು ಜಾಥಾ ಕಾರ್ಯಕ್ರಮ ಹಾಗೂ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.

ಕರ್ನಾಟಕ ರಕ್ಷಣಾ ವೇದಿಕೆಯ ಉಡುಪಿ ಘಟಕದ ಜಿಲ್ಲಾಧ್ಯಕ್ಷರಾದ ಅ ರಾ ಪ್ರಭಾಕರ ಪೂಜಾರಿ ಜಾಥಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಉಡುಪಿ ಜಿಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ತೆಗೆಯುವುದು ಮತ್ತು ಸಾಗಾಣಿಕೆಗೆ ನಿರ್ಬಂಧ ಇರುವುದರಿಂದ ಹೊರಭಾಗದಿಂದ ಮರಳು ಮತ್ತು ಕೆಂಪು ಕಲ್ಲು ಸಾಗಾಣಿಕೆ ಮಾಡುತ್ತಿರುವ ಲಾರಿಗಳನ್ನು ಪೋಲಿಸರು ನಿಯಮ ಮೀರಿ ಹಿಡಿದು ಅವರ ಮೇಲೆ ಅನಾವಶ್ಯಕವಾಗಿ ಪ್ರಕರಣ ದಾಖಲಿಸುತ್ತಿದ್ದಾರೆ. ಗಣಿಗಾರಿಕೆ ಇಲಾಖೆಯವರು ಮಾಡಬೇಕಾದ ಕೆಲಸವನ್ನು ಪೋಲಿಸರು ಮಾಡುತ್ತಿದ್ದು, ಇದರಿಂದ ಹೊಟ್ಟೆಪಾಡಿಗಾಗಿ ಕೆಲಸ ಮಾಡುತ್ತಿರುವ ಚಾಲಕರು ಮತ್ತು ಈ ವ್ಯವಹಾರವನ್ನೇ ನಂಬಿಕೊಂಡಿರುವ ಮಾಲೀಕರು ಏನೂ ಮಾಡಲಾಗದೆ ಕೈ ಹೊತ್ತುಕೊಂಡು ಕುಳಿತುಕೊಳ್ಳುವಂತಾಗಿದೆ.

ಅಲ್ಲದೇ ಈ ಕೆಂಪು ಕಲ್ಲು ಮತ್ತು ಮರಳನ್ನೇ ನಂಬಿಕೊಂಡ ಸಾಮಾನ್ಯ ಜನ ತಮ್ಮ ಕನಸಿನ ಮನೆಯನ್ನು ಕಟ್ಟಿಕೊಳ್ಳಲಾಗದೆ ಸಮಸ್ಯೆಯಲ್ಲಿ ಸಿಲುಕಿದ್ದಾರೆ ಶೀಘ್ರದಲ್ಲೇ ಸಮಸ್ಯೆಯನ್ನು ಬಗೆಹರಿಸಲು ಮನವಿ ಮಾಡಿಕೊಂಡರು ಹಾಗೂ ಸಮಸ್ಯೆಗೆ ಪರಿಹಾರ ಮಾಡದಿದ್ದರೆ ಅಹೋರಾತ್ರಿ ಧರಣಿ ಸತ್ಯಾಗ್ರಹ ಮಾಡುತ್ತೇವೆ ಎಂದರು. ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ ಘಟಕದ ವತಿಯಿಂದ ಮಾನ್ಯ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರವನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಅ ರಾ ಪ್ರಭಾಕರ್ ಪೂಜಾರಿ,ಜಿಲ್ಲಾ ಪ್ರಧಾನ ಕಾರ್ಯದರ್ಶಿಹೇಮಂತ್ ಕುಮಾರ್ ವಿ,ಜಿಲ್ಲಾ ಜಾಲತಾಣ ಸಂಚಾಲಕರಾದ ಪ್ರವೀಣ್ ಡಿಕ್ರೋಝ್,ಉಪಾಧ್ಯಕ್ಷರಾದಅನಿಲ್ ಪೂಜಾರಿ,ಗೌರವ ಅಧ್ಯಕ್ಷರಾದಗೋಪಾಲ್ ಮೆಂಡನ್,ಗೌರವ ಅಧ್ಯಕ್ಷರಾದ ಜಯಸಾಲಿಯಾನ್,ಗೌರವ ಸಲಹೆಗಾರರಾದ ಗಜೇಂದ್ರ ಪಿಕೆ,ಜಿಲ್ಲಾ ಸಂಚಾಲಕರಾದ ಸುಧಾಕರ್ ಕಲ್ಮಾಡಿ,ಜಿಲ್ಲಾ ಉಪಾಧ್ಯಕ್ಷರಾದ ಉಮೇಶ್ ಶೆಟ್ಟಿ,ಪ್ರಧಾನ ಸಂಚಾಲಕರು ಕಿರಣ್ ಪಿಂಟೋ ,ಜಿಲ್ಲಾ ಉಪಾಧ್ಯಕ್ಷರಾದ ಶಾಬೂದ್ದೀನ್,ಜಿಲ್ಲಾ ಕಾರ್ಯದರ್ಶಿ ಅಬ್ದುಲ್ ಮಜೀದ್ಜಿಲ್ಲಾ ಸಂಚಾಲಕರಾದ ಎಸ್ ಕೃಷ್ಣ ಹಾಗೂ ತಾಲ್ಲೂಕು ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.
