ಉಡುಪಿ : ತುಳುನಾಡಿನಲ್ಲಿ ಮತ್ತೊಮ್ಮೆ ತನ್ನ ಕಾರ್ಣಿಕ ತೋರಿಸಿಕೊಟ್ಟ ಕೊರಗಜ್ಜ ಸ್ವಾಮಿ

ತುಳುನಾಡಿನ ಕೊರಗಜ್ಜ ಸ್ವಾಮಿ ಮತ್ತೊಮ್ಮೆ ತನ್ನ ಕಾರ್ಣಿಕವನ್ನು ತೋರಿಸಿಕೊಟ್ಟಿದೆ. ನಂಬಿದವರನ್ನು ಹರಸಿ,ಇಷ್ಟಾರ್ಥಗಳನ್ನು ಈಡೇರಿಸುವ ಕೊರಗಜ್ಜ ಆರಿ ಹೋಗುತ್ತಿದ್ದ ಕುಟುಂಬವೊಂದರ ನಂದದೀಪವನ್ನು ಬೆಳಗಿಸಿಕೊಟ್ಟಿರುವ ಅಪರೂಪದ ಘಟನೆಗೆ ತುಳುನಾಡು ಸಾಕ್ಷಿಯಾಗಿದೆ.

ನಾಲ್ಕು ತಿಂಗಳ ಹಸುಕೂಸೊಂದು ಕೊರಗಜ್ಜನ ಕೃಪೆಯಿಂದ ಸಾವನ್ನೇ ಗೆದ್ದು ಬಂದಿದೆ.ಹೌದು ಸಾಗರ ಮೂಲದ ಪುಟ್ಟ ಹೆಣ್ಣು ಮಗುವಿಗೆ ವಿಪರೀತ ಜ್ವರ ಕಂಡು ಬಂದಿತ್ತು.ಎರಡು ದಿನ ಕಳೆದರೂ ಜ್ವರ ಕಡಿಮೆಯಾಗದೇ ಮಗು ಅಳು ನಿಲ್ಲಿಸುತ್ತಿರಲ್ಲಿಲ್ಲ.ಹೀಗಾಗಿ ಕುಂದಾಪುರದ ಅಸ್ಪತ್ರೆಗೆ ದಾಖಲಿಸಲಾಗಿತ್ತು.ಅಸ್ಪತ್ರೆಯಲ್ಲಿ ಮಗುವಿಗೆ ಪಿಡ್ಸ್ ಇರುವುದಾಗಿಯೂ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಅಸ್ಪತ್ರೆಗೆ ದಾಖಲಿಸುವಂತೆ ಸೂಚಿಸಿದ ಹಿನ್ನಲೆಯಲ್ಲಿ ಕೆಎಂಸಿಗೆ ದಾಖಲಿಸಲಾಗಿತ್ತು.ಐಸಿಯುನಲ್ಲಿದ್ದ ಮಗುವಿನ ಅರೋಗ್ಯ ಚಿಂತಾಜನಕವಾಗಿತ್ತು.ಅಷ್ಟೇ ಅಲ್ಲ ಪದೇ ಪದೇ ಮಗುವಿನ ಹೃದಯ ಸ್ತಬ್ತವಾಗುತ್ತಿರುವುದರ ಬಗ್ಗೆ ವೈದರು ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದರು.ವೈದರ ಪ್ರಯತ್ನ ಮಾಡುವುದಾಗಿಯೂ ಭರವಸೆ ನೀಡಿದರೂ ಮಗುವಿನ ಪ್ರಾಣ ಉಳಿಯುವ ಬಗ್ಗೆ ಸಂಶಯ ವ್ಯಕ್ಯಪಡಿಸಿದ್ದರು.

ಮಗುವಿನ ಪರಿಸ್ಥಿತಿ ಕಂಡ ಕುಟುಂಬಸ್ಥರು ಕಂಗಾಲಾಗಿ ಹೋಗಿದ್ದರು.ಅಷ್ಟರಲ್ಲಿ ಅಸ್ಪತ್ರೆ ಬಳಿಯಿದ್ದ ಒರ್ವ ವ್ಯಕ್ತಿ ಕೊರಗಜ್ಜ ಕ್ಷೇತ್ರದಲ್ಲಿ ಪ್ರಾರ್ಥನೆ ಸಲ್ಲಿಸುವಂತೆ ಹೇಳಿದ ಹಿನ್ನಲೆಯಲ್ಲಿ ಮಗುವಿನ ಹೆತ್ತವರು ಇಂದ್ರಾಳಿ ,ಎಂಜಿ ಎಂ ಹಾಸ್ಟೆಲ್ ಬಳಿಯಿರುವ ಕೊರಗಜ್ಜನ ಕ್ಷೇತ್ರಕ್ಕೆ ಬಂದು ಪ್ರಾರ್ಥನೆ ಸಲ್ಲಿಸಿ ಗಂಧ ಪ್ರಸಾದ ಪಡೆದು ತೆರಳಿದ್ದರು.ಗಂಭೀರ ಸ್ಥಿತಿಯಲ್ಲಿದ್ದ ಪುಟ್ಟ ಕಂದಮ್ಮನ ಅರೋಗ್ಯ ದೀಢಿರಾಗಿ ಚೇತರಿಕೆ ಕಾಣಿಸಿಕೊಳ್ಳಲು ಪ್ರಾರಂಭಿಸಿತ್ತು. ವೈದರು ಕೂಡ ತಮ್ಮ ಕೈಲಾದ ಪ್ರಯತ್ನಗಳನ್ನು ಮಾಡುವ ಮೂಲಕ ಹತ್ತೊಂಬತ್ತು ದಿನಗಳಲ್ಲಿ ಮಗು ಆರೋಗ್ಯವಾಗಿ ಹೆತ್ತಮ್ಮಳ ಕೈಯಲ್ಲಿ ಮತ್ತೆ ಬಂದು ಸೇರಿತು.

ಹೃದಯ ಬಡಿತವೇ ನಿಂತು ಹೋಯಿತು ಎಂದಿದ್ದ ಮಗ ಮತ್ತೆ ಕಿಲ ಕಿಲನಗುತ್ತಿರುವುದನ್ನ ಕಂಡ ಕುಟುಂಬಸ್ಥರ ಸಂತೋಷ ಮುಗಿಲು ಮುಟ್ಟಿತ್ತು. ಇದಕ್ಕೆಲ್ಲ ಕಾರಣ ನಂಬಿದ ಕೊರಗಜ್ಜ ಎನ್ನುವುದು ಕುಟುಂಬಸ್ಥರ ನಂಬಿಕೆ ಹೀಗಾಗಿ ಅಸ್ಪತ್ರೆಯಿಂದ ನೇರವಾಗಿ ಇಂದ್ರಾಳಿ ಬಳಿಯ ಕೊರಗಜ್ಜನ ಕ್ಷೇತ್ರಕ್ಕೆ ಬಂದು ಮಗುವನ್ನು ಕೊರಗಜ್ಜ ಸ್ವಾಮಿಯ ಮುಂದಿಟ್ಟು ಪ್ರಾರ್ಥನೆ ಸಲ್ಲಿಸಿ ಗಂಧ ಪ್ರಸಾದ ಪಡೆದುಕೊಂಡರು. ಬದುಕಿರುವವರೆಗೂ ಈ ಮಗು ಕೊರಗಜ್ಜನ ಪ್ರಸಾದವೆಂದೇ ನಂಬಿ ಬದುಕುತ್ತೆವೆ ಎಂದು ಹೇಳುತ್ತಾ ಅನಂದ ಭಾಷ್ಪಗಳೊಂದಿಗೆ ತನ್ನೂರಿಗೆ ತೆರಳಿದ್ದರು.

ತುಳುನಾಡಿನ ಕಾರ್ಣಿಕದ ದೈವ ಕೊರಗಜ್ಜ ಒಂದಲ್ಲ ಒಂದು ರೀತಿಯಲ್ಲಿ ತನ್ನ ಕಾರ್ಣಿಕತೆಯನ್ನು ತೋರಿಸಿ ಕೊಡುತ್ತಿರುತ್ತಾನೆ ಎನ್ನುವುದಕ್ಕೆ ಇದು ಮತ್ತೊಂದು ಸಾಕ್ಷಿ. ಇಂದ್ರಾಳಿ ಬಳಿಯಿರುವ ಕ್ಷೇತ್ರದಲ್ಲಿ ಇಂತಹ ಹತ್ತಾರು ಪವಾಡಗಳು ನಡೆಯುತ್ತಿರುತ್ತವೆ ಇದೊಂದು ಉದಾಹರಣೆಯಷ್ಟೇ.
