HomeFresh Newsಉಡುಪಿ: ಲಾರಿ ಪಲ್ಟಿ:ಚಾಲಕ ಮೃತ್ಯು

ಉಡುಪಿ: ಲಾರಿ ಪಲ್ಟಿ:ಚಾಲಕ ಮೃತ್ಯು

ಉಡುಪಿ ಟಿಪ್ಪರ್ ಲಾರಿ ಪಲ್ಟಿಯಾಗಿ ಚಾಲಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಳ್ಳೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಟ್ಟಿಂಗೇರಿ ಗಣಪಣಕಟ್ಟೆ ತಿರುವಿನ ಬಳಿ ಮಂಗಳವಾರ (ಫೆ.25ರಂದು) ಮುಂಜಾನೆ ನಡೆದಿದೆ.ಮೃತರನ್ನು ಬೈಂದೂರಿನ ಸುಬ್ರಮಣ್ಯ ಆಚಾರ್ಯ (40) ಎಂದು ಗುರುತಿಸಲಾಗಿದೆ. ಮಂಗಳವಾರ ಮುಂಜಾನೆ ಸುಮಾರಿಗೆ ಈ ಘಟನೆ ನಡೆದಿದೆ.

4 ಗಂಟೆಯ ಟಿಪ್ಪರ್ ಬೈಂದೂರಿನಿಂದ ಪಳ್ಳಿಯ ಕೋರೆಗೆ ಜಲ್ಲಿ ತರಲು ಹೋಗುತ್ತಿದ್ದ ವೇಳೆ ಪಲ್ಟಿಯಾಗಿದೆ. ಪರಿಣಾಮ ಚಾಲಕ ಸುಬ್ರಮಣ್ಯ ಟಿಪ್ಪರ್ ಅಡಿಗೆ ಬಿದ್ದು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಸ್ಥಳೀಯರು ಹಾಗೂ ಶಿರ್ವ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿ ಜೆಸಿಬಿ ಮೂಲಕ ಲಾರಿಯನ್ನು ಎತ್ತಿ ಚಾಲಕನ ಮೃತದೇಹವನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments