ಉಡುಪಿ: ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ: ದರೋಡೆಗೆ ಬಂದವರ ಕೃತ್ಯ ಶಂಕೆ!
ಒಂದೇ ಕುಟುಂಬದ ನಾಲ್ವರನ್ನು ಕೊಲೆ ಮಾಡಿದ ಘಟನೆ ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ನೇಜಾರಿನಲ್ಲಿ ನಡೆದಿದೆ.
ನಾಲ್ವರ ಹತ್ಯೆ ಹಿಂದೆ ದರೋಡೆ ಕೃತ್ಯದ ಶಂಕೆ ವ್ಯಕ್ತವಾಗಿದೆ. ಹಬ್ಬದ ದಿನ ಈ ಸುದ್ದಿ ಕೇಳಿ ಜನ ಬೆಚ್ಚಿ ಬಿದ್ದಿದ್ದಾರೆ. ಮನೆಗೆ ನುಗ್ಗಿ ತಾಯಿ ಹಾಗೂ ಮೂವರು ಮಕ್ಕಳನ್ನು ಹತ್ಯೆ ಮಾಡಲಾಗಿದೆ. ಈ ಮನೆಯ ಯಜಮಾನ ವಿದೇಶದಲ್ಲಿ ಉದ್ಯೋಗದಲ್ಲಿದ್ದಾರೆ. ಮನೆಯಲ್ಲಿದ್ದ ಮೂವರು ಮಕ್ಕಳು ಮತ್ತು ತಾಯಿಯನ್ನು ಚೂರಿಯಲ್ಲಿ ಇರಿದು ಕೊಲೆಗೈಯಲಾಗಿದೆ. ಕೊಲೆಯಾದವರನ್ನು ಹಸೀನಾ (46 ವ), ಅಫ್ನಾನ್ (23 ವ), ಅಯ್ನಾಝ್ (21 ವ), ಆಸಿಂ (12ವ) ಎಂದು ಗುರುತಿಸಲಾಗಿದೆ.
ವಿಷಯ ತಿಳಿದು ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಮಲ್ಪೆ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.