HomeFresh Newsಉಡುಪಿ ಹತ್ಯೆ ಪ್ರಕರಣ: ಆರೋಪಿಗೆ 14 ದಿನ ನ್ಯಾಯಾಂಗ ಬಂಧನ

ಉಡುಪಿ ಹತ್ಯೆ ಪ್ರಕರಣ: ಆರೋಪಿಗೆ 14 ದಿನ ನ್ಯಾಯಾಂಗ ಬಂಧನ

ಉಡುಪಿಯ ನೇಜಾರುವಿನಲ್ಲಿ ಒಂದೇ ಕುಟುಂಬದ ನಾಲ್ವರ ಕಗ್ಗೊಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಆರೋಪಿ ಪ್ರವೀಣ್ ಅರುಣ್ ಚೌಗುಲೆ ಯನ್ನು ಪೆÇಲೀಸರು ಉಡುಪಿ ಪ್ರಧಾನ ಸಿವಿಲ್ ಹಾಗೂ ಜೆಎಂಎಫ್‍ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ನ್ಯಾಯಾಲಯ ಆರೋಪಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದೆ.

ಬಂಧಿತ ಆರೋಪಿ ಪ್ರವೀಣ್ ನನ್ನು ನ.15ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದ ಪೊಲೀಸರು, ಗಂಭೀರ ಪ್ರಕರಣದ ಹಿನ್ನೆಲೆಯಲ್ಲಿ ಹೆಚ್ಚಿನ ತನಿಖೆಗಾಗಿ 14 ದಿನಗಳ ಕಾಲ ಪೊಲೀಸ್ ಕಸ್ಟಡಿ ಪಡೆದುಕೊಂಡಿದ್ದರು. ಈ ವೇಳೆ ಆರೋಪಿಯನ್ನು ನ.28ರಂದು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ನ್ಯಾಯಾಲಯ ಆದೇಶ ನೀಡಿತ್ತು. ಪ್ರವೀಣ್ ನನ್ನು ಕಸ್ಟಡಿಗೆ ಪಡೆದಿದ್ದ ಪೆÇಲೀಸರು, ಪ್ರಕರಣಕ್ಕೆ ಸಂಬಂಧಿಸಿ ಸ್ಥಳ ತನಿಖೆ, ಮಹಜರು, ಹೇಳಿಕೆ, ಆರೋಪಿ ಗುರುತು ಸೇರಿದಂತೆ ಎಲ್ಲ ರೀತಿಯ ತನಿಖೆ ಪ್ರಕ್ರಿಯೆಯನ್ನು ವಾರದೊಳಗೆ ಪೂರ್ಣಗೊಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments