HomeFresh Newsಉಡುಪಿ: ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ-2024

ಉಡುಪಿ: ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ-2024

ಉಡುಪಿ: ವಾಹನ ಚಾಲಕರು ಸಕಾಲಕ್ಕೆ ಕಣ್ಣಿನ ತಪಾಸಣೆ ಮಾಡಿಸಿ ಕೊಂಡು ರಸ್ತೆ ಅಪಘಾತವನ್ನು ತಡೆಗಟ್ಟುವಲ್ಲಿ ಸಹ ಕರಿಸಬೇಕು ಎಂದು ನಗರದ ಪ್ರಸಾದ್ ನೇತ್ರಾಲಯದ ಡಾ.ಕೃಷ್ಣಪ್ರಸಾದ್ ಹೇಳಿದ್ದಾರೆ.

ಮಣಿಪಾಲದ ಪ್ರಾದೇಶಿಕ ಸಾರಿಗೆ ಕಛೇaರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಪ್ರಾದೇಶಿಕ ಸಾರಿಗೆ ಇಲಾಖೆ ಉಡುಪಿ ವತಿ ಯಿಂದ ಸೋಮವಾರ ಆಯೋಜಿಸಿದ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಇತ್ತೀಚಿನ ದಿನಗಳಲ್ಲಿ ರಸ್ತೆ ಅಪಘಾತದ ಪ್ರಕರಣಗಳು ಹೆಚ್ಚುತ್ತಿವೆ. ಅಪಘಾತದಲ್ಲಿ ಮರಣ ಹಾಗೂ ತೀವ್ರತರದ ಹಾನಿ ಉಂಟಾದ ಕುಟುಂಬ ವರ್ಗದವರು ಸಂಕಷ್ಟ ಅನುಭವಿಸುವುದನ್ನು ನಾವು ಕಾಣುತ್ತಿದ್ದೇವೆ. ರಸ್ತೆ ಸುರಕ್ಷತೆ ನಿಯಮಗಳನ್ನು ಸಾರ್ವಜನಿಕರು ಚಾಚು ತಪ್ಪದೇ ಪಾಲಿಸು ವುದರಿಂದ ರಸ್ತೆ ಅಪರಾಧ ಪ್ರಕರಣಗಳನ್ನು ತಡೆಗಟ್ಟಲು ಸಾಧ್ಯ ಎಂದವರು ನುಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾದೇಶಿಕ ಸಾರಿಗೆ ಅಧಿಕಾರಿ ಪಿ.ರವಿಶಂಕರ್, ಚಾಲಕರು ರಸ್ತೆಗಳಲ್ಲಿ ಎಡಬದಿಯಲ್ಲಿ ಚಲಿಸಬೇಕು. ವಿರುದ್ಧ ದಿಕ್ಕಿನಲ್ಲಿ ಚಲಿಸಬಾರದು. ಚಾಲನೆಯಲ್ಲಿ ಮೊಬೈಲ್ ಬಳಸ ಬಾರದು. ಎಲ್ಲಾ ಚಾಲ ಕರು ರಸ್ತೆ ಸುರಕ್ಷತೆಯ ನಿಯಮಗಳನ್ನು ಅನುಸರಿಸಿ ಸುರಕ್ಷಿತ ಚಾಲನೆ ಮಾಡಬೇಕು ಎಂದರು. ಡಾ.ವಿಜಯೇಂದ್ರ ಅವರೂ ಮಾತನಾಡಿದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments