ಉಡುಪಿ: ಜಿಲ್ಲೆಯಲ್ಲಿ ಮತ್ತೆ ಆಕ್ಟಿವ್ ಆದ ನಕ್ಸಲ್ ಚಟುವಟಿಕೆ..!!
ಉಡುಪಿಯ ಬೈಂದೂರು ತಾಲೂಕಿನ ಕೊಲ್ಲೂರು ವ್ಯಾಪ್ತಿಯ ಹಲವೆಡೆ ನಕ್ಸಲೀಯರು ಓಡಾಟ ನಡೆಸಿದ ಶಂಕೆ ವ್ಯಕ್ತವಾಗಿದೆ.
ಬೈಂದೂರು ತಾಲೂಕಿನ ಮುದೂರು, ಜಡ್ಕಲ್, ಬೆಳ್ಕಲ್ ಪರಿಸರದಲ್ಲಿ ಓಡಾಟ ನಡೆಸಿದ್ದು, ಹಲವು ಮನೆಗಳಿಗೆ ಭೇಟಿ ನೀಡಿ ನಾಲ್ವರ ತಂಡ ತೆರಳುತ್ತಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಹಸಿರು ಬಣ್ಣದ ಡ್ರೆಸ್ ಕೋಡ್, ಇಬ್ಬರಲ್ಲಿ ಶಸ್ತ್ರಾಸ್ತ್ರ ಇರುವ ಬಗ್ಗೆ ಸ್ಥಳೀಯರು ಅರಣ್ಯ ಇಲಾಖೆ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಕಾರ್ಯಪ್ರವೃತ್ತರಾದ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕುಂದಾಪುರ ಡಿವೈಎಸ್ಪಿ ಬೆಳ್ಳಿಯಪ್ಪ ಭೇಟಿ, ಪರಿಶೀಲನೆ ನಡೆಸಿದ್ದರು, ಯಾರೇ ಅಪರಿಚಿತರು ಬಂದಲ್ಲಿ ಪೊಲೀಸರಿಗೆ ಮಾಹಿತಿ ನೀಡುವಂತೆ ಸೂಚನೆ ನೀಡಿದ್ದಾರೆ.