ಉಡುಪಿ;ನಿಡಂಬೂರು ಯುವಕ ಮಂಡಲ ರಿ. ಕಡೆಕಾರು ಇದರ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ

ನಿಡಂಬೂರು ಯುವಕ ಮಂಡಲ ರಿ. ಕಡೆಕಾರು ಇದರ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಇಂದು ದಿನಾಂಕ 25-08-2025 ರಂದು ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಶುಭ ಹಾರೈಸಿದರು.ಈ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕರಾದ ಯಶ್ ಪಾಲ್ ಸುವರ್ಣ, ಜಿ. ಶಂಕರ್ ಫ್ಯಾಮಿಲಿ ಟ್ರಸ್ಟಿನ ಪ್ರವರ್ತಕರಾದ ನಾಡೋಜ ಡಾ. ಜಿ. ಶಂಕರ್, ಅಂಬಲಪಾಡಿ ಶ್ರೀ ಜನಾರ್ದನ ಮಹಾಕಾಳಿ ದೇವಸ್ಥಾನದ ಧರ್ಮದರ್ಶಿಗಳಾದ ಡಾ. ನಿ. ಬೀ. ವಿಜಯ ಬಲ್ಲಾಳ್, ಗಣ್ಯರಾದ ಶ್ರೀ ತಲ್ಲೂರು ಶಿವರಾಮ ಶೆಟ್ಟಿ, ಶ್ರೀ ಪುರುಷೋತ್ತಮ ಶೆಟ್ಟಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.
