ಉಡುಪಿ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ನಾಮಪತ್ರ ಸಲ್ಲಿಕೆ

ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ಅವರು ಜಿಲ್ಲಾ ಕಾಂಗ್ರೆಸ್ ಪ್ರಮುಖರೊಂದಿಗೆ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ತಾಲೂಕು ಕಚೇರಿಯವರೆಗೂ ಪಾದಯಾತ್ರೆಯಲ್ಲಿ ಬಂದು ನಾಮಪತ್ರ ಸಲ್ಲಿಸಿದರು. ಕಾಂಗ್ರೆಸ್ ಭವನದ ಮುಂಭಾಗದಲ್ಲಿ ಸಭೆ ನಡೆಸಿ ಅನಂತರ ಅಲ್ಲಿಂದ ಪಾದಯಾತ್ರೆಯಲ್ಲಿ ಬಂದು ಬೆಳಗ್ಗೆ 11.15ಕ್ಕೆ ನಾಮಪತ್ರ ಸಲ್ಲಿಸಿದರು. ಈ ವೇಳೆ ಅವರ ತಾಯಿ ಸರಳಾ ಕಾಂಚನ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ ಕಾಂಚನ್, ಕಾಪು ಅಭ್ಯರ್ಥಿ ವಿನಯ ಕುಮಾರ್ ಸೊರಕೆ ಇದ್ದರು.

ಇದಕ್ಕೂ ಮೊದಲು ಕಾಂಗ್ರೆಸ್ ಭವನದ ಮುಂಭಾಗದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಪ್ರಸಾದ್ ರಾಜ್ ಕಾಂಚನ್, ಚುನಾವಣೆ ಎದುರಿಸಲು ಸಜ್ಜಾಗಿದ್ದೇವೆ. ಕಾಂಗ್ರೆಸ್ ಪಕ್ಷದ ಕೊಡುಗೆಯಿಂದ ಉಡುಪಿಯಿಂದ ವಿಶ್ವ ಮಟ್ಟದ ಗುರುತಿಸಿಕೊಂಡಿದೆ. ವಿ.ಎಸ್ ಆಚಾರ್ಯ ಅವರ ದೈವಾಧೀನರಾದ ನಂತರ ಬಿಜೆಪಿ ಧೂಳಿಪಟವಾಗಿದೆ. ಕಾರ್ಯಕರ್ತರ ಕಷ್ಟ ಸುಖದಲ್ಲಿ ನಿರಂತರವಾಗಿ ನಿಮ್ಮ ಜತೆಗೆ ಇರುತ್ತೇನೆ ಎಂದರು.

Related Posts

Leave a Reply

Your email address will not be published.