HomeFresh Newsರಾಜ್ಯದ ಪತ್ರಕರ್ತರ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನಡೆಯಲಿದೆ ಪುರಸ್ಕಾರ

ರಾಜ್ಯದ ಪತ್ರಕರ್ತರ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನಡೆಯಲಿದೆ ಪುರಸ್ಕಾರ

ಉಡುಪಿ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ರಜತ ಮಹೋತ್ಸವ ಸಮಿತಿ ಹಾಗೂ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಇವರ ಸಹಯೋಗದಲ್ಲಿ ರಾಜ್ಯದ ಪತ್ರಕರ್ತರ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುತಿಭಾ ಪುರಸ್ಕಾರ – 2023 ಕಾರ್ಯಕ್ರಮ ಜುಲೈ 8 ರಂದು ಶನಿವಾರ ಮಧ್ಯಾಹ್ನ 2 ಗಂಟೆಗೆ ಉಡುಪಿ ಜಿಲ್ಲೆಯ ಕೆಎಂಸಿ ಆಸ್ಪತ್ರೆ ಮಣಿಪಾಲ ಇದರ ಟಿಎಂಎಪೈ ಆಡಿಟೋರಿಯಂ ನ ಮೂರನೇ ಮಹಡಿಯಲ್ಲಿ ಜರುಗಲಿದೆ ಎಂದು ಉಡುಪಿ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾದ ರಾಜೇಶ್ ಶೆಟ್ಟಿ ಅಲೆವೂರು ಪತ್ರಿಕಾಗೋಷ್ಠಿಯಲ್ಲಿ ಇಂದು ತಿಳಿಸಿದ್ದಾರೆ.

ಈ ಕಾರ್ಯಕ್ರಮದ ಉದ್ಘಾಟನೆಯನ್ನು ಕರ್ನಾಟಕದ ವಿಧಾನಸಭಾಧ್ಯಕ್ಷರಾದ ಯು ಟಿ ಖಾದರ್ ನೆರವೇರಿಸಲಿದ್ದು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಪಶಸ್ತಿ ಪ್ರಧಾನ ನೆರವೇರಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿ ರಾಜ್ಯ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಮಂಕಾಳ ಎಸ್‌. ವೈದ್ಯ, ಮಾಹೆ ಮಣಿಪಾಲ ಇದರ ಸಹಕುಲಾಧಿಪತಿ ಡಾ. ಎಚ್ ಎಸ್. ಬಲ್ಲಾಳ್ ವಿಶೇಷ ಆಹ್ವಾನಿತರಾಗಿ ಆಗಮಿಸಲಿದ್ದು, ಮುಖ್ಯ ಅತಿಥಿಗಳಾಗಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶಪಾಲ್ ಎಸ್‌ ಸುವರ್ಣ, ಉಡುಪಿ ಜಿಲ್ಲಾಧಿಕಾರಿ ಎಂ ಕೂರ್ಮ ರಾವ್, ಕೆಎಂಸಿ ಮಣಿಪಾಲ ಇದರ ವೈದ್ಯಕೀಯ ಅಧೀಕ್ಷಕರಾದ ಡಾ. ಅವಿನಾಶ್ ಶೆಟ್ಟಿ ಭಾಗವಹಿಸಲಿದ್ದಾರೆ.

ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಾಗಿರುವ ಪತ್ರಕರ್ತರ ಮಕ್ಕಳು, ಹೆತ್ತವರು, ಜಿಲ್ಲಾ ಘಟಕಗಳ ಪದಾಧಿಕಾರಿಗಳು ಸೇರಿದಂತೆ ಸುಮಾರು 300 ಮಂದಿ ಪುತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಉಡುಪಿ ಜಿಲ್ಲಾ ಪತ್ರಕರ್ತರ ಸಂಘ ಆಗಮಿಸಲಿರುವ ಅತಿಥಿಗಳಿಗೆ ವಸತಿ, ಊಟದ ವ್ಯವಸ್ಥೆಯನ್ನು ಮಾಡಲಿದೆ. ಜುಲೈ 8ರ ಬೆಳಗ್ಗೆ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿಯ ಸಭೆ ಉಡುಪಿ ಜಿಲ್ಲಾ ಸಂಘದ ಆತಿಥ್ಯದಲ್ಲಿ ಉಡುಪಿ ಐ.ಎಂ.ಎ ಭವನದಲ್ಲಿ ಜರುಗಲಿದೆ.

ಇಂದು ನಡೆದ ಪತ್ರಿಕಾಗೋಷ್ಟಿಯಲ್ಲಿ ಕರ್ನಾಟಕ ಕಾರ್ನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯ ಕಿರಣ್ ಮಂಜನಬೈಲು, ರಜತ ಮಹೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಜಯಕರ ಸುವರ್ಣ, ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ,ರಜತ ಮಹೋತ್ಸವ ಸಮಿತಿಯ ಸಂಚಾಲಕ ಮುಹಮ್ಮದ್ ಶರೀಫ್, ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments