ಉಡುಪಿ: ನೇತ್ರಜ್ಯೋತಿ ಕಾಲೇಜಿನಲ್ಲಿ ಸಂಶೋಧನಾ ವಿಧಾನ ಕಾರ್ಯಗಾರ

ಉಡುಪಿಯ ಪ್ರತಿಷ್ಠಿತ ನೇತ್ರ ಜ್ಯೋತಿ ಕಾಲೇಜಿನಲ್ಲಿ ಅಧ್ಯಾಪಕರಿಗೆ ಸಂಶೋಧನಾ ವಿಧಾನ ಕುರಿತಾದ ಒಂದು ದಿನದ ಕಾರ್ಯಾಗಾರವನ್ನು ಏರ್ಪಡಿಸಲಾಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಕೊಡಗು ಮೆಡಿಕಲ್ ಕಾಲೇಜಿನ ಸಮುದಾಯದ ಔಷಧ ವಿಭಾಗದ ಮುಖ್ಯಸ್ಥರಾದ ಡಾಕ್ಟರ್ ರಾಮಚಂದ್ರ ಕಾಮತ್ ,ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ ಬೆಂಗಳೂರಿನ ಅಸೋಸಿಯೇಟ್ ಪ್ರೊಫೆಸರ್ ಡಾಕ್ಟರ್ ಪ್ರಚೇತ್,ಮೈಸೂರ್ ಮೆಡಿಕಲ್ ಕಾಲೇಜಿನ ಅಸೋಸಿಯೇಟ್ ಪ್ರೊಫೆಸರ್ ಡಾಕ್ಟರ್ ಸುಮಂತ್ ರವರು ಸಂಶೋಧನಾ ವಿಧಾನ ಕುರಿತಾದ ವಿವರವಾದ ಮಾಹಿತಿ ನೀಡಿದರು. ಕಾರ್ಯಕ್ರಮ ದಲ್ಲಿ ಕಾಲೇಜಿನ ಸಿ ಓ ಓ ಡಾ|ಗೌರಿ ಪ್ರಭು , ಎಚ್ ಆರ್ ಶ್ರೀ ಮತಿ ತಾರಾ ಶಶಿಧರ್ ಕೋರ್ಡಿನೇಟರ್ ಗಳಾದ ಶ್ರೀ ಮಾಧವ ಪೂಜಾರಿ ಹಾಗೂ ಸಚಿನ್ ಶೆಟ್ ಉಪಸ್ಥಿತರಿದರು. ಉಪನ್ಯಾಸಕಿ ಮೇಘನರವರು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.
