ಉಡುಪಿ ಸಂತೆಕಟ್ಟೆ ಬಳಿ ಕುಸಿಯುತ್ತಿರುವ ಹೆದ್ದಾರಿ
ಉಡುಪಿಯ ಸಂತೆಕಟ್ಟೆಯಲ್ಲಿ ನಡೆಯುತ್ತಿರುವ ಅಂಡರ್ ಪಾಸ್ ಕಾಮಗಾರಿ ಪ್ರದೇಶದಲ್ಲಿ ಮಣ್ಣು ಕುಸಿಯುತ್ತಿದ್ದು ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ.
ಕಳೆದ ಕೆಲವು ದಿನಗಳಿಂದ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಸಂತೆಕಟ್ಟೆ ಪ್ರದೇಶದಲ್ಲಿ ಆರಂಭಗೊಂಡಿರುವ ಅಂಡರ್ ಪಾಸ್ ಕಾಮಗಾರಿ ನಡೆಯುವ ಪ್ರದೇಶದಲ್ಲಿ ಮಣ್ಣು ಕುಸಿಯಲು ಆರಂಭವಾಗಿದ್ದು, ಇದರಿಂದ ಇಲ್ಲಿ ನಿರ್ಮಿಸಲಾದ ತಡೆಗೋಡೆಗಳಿಗೂ ಹಾನಿಯಾಗಿದೆ. ಅಷ್ಟು ಮಾತ್ರವಲ್ಲದೆ ಮಣ್ಣು ಕುಸಿತ ಹೆಚ್ಚಾಗುತ್ತಿದ್ದು ಇದರಿಂದ ಪಕ್ಕದಲ್ಲೇ ಇರುವ ಬೃಹತ್ ಕಟ್ಟಡ ಹಾಗೂ ನಿವಾಸಿಗಳಲ್ಲಿ ಆತಂಕ ಹೆಚ್ಚಾಗಿದೆ. ಕೂಡಲೇ ಸಂಬಂಧ ಪಟ್ಟ ಅಧಿಕಾರಿಗಳು ಇತ್ತ ಗಮನ ಹರಿಸಿ ಕೂಡಲೇ ಕ್ರಮ ವಹಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.