HomeFresh Newsಉಡುಪಿ: ವೈಯಕ್ತಿಕ ಸಮಸ್ಯೆಯಿಂದ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

ಉಡುಪಿ: ವೈಯಕ್ತಿಕ ಸಮಸ್ಯೆಯಿಂದ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

ವೈಯಕ್ತಿಕ ಸಮಸ್ಯೆಯಿಂದ ಮನನೊಂದ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಪೆರ್ಡೂರಿನಲ್ಲಿ ಸಂಭವಿಸಿದೆ.

ಮೃತರನ್ನು ಪೆರ್ಡೂರು ಗ್ರಾಮದ ಶೋಭಾ ಎಂಬವರ ಮಗಳು ನಯನ(17) ಎಂದು ಗುರುತಿಸಲಾಗಿದೆ. ಪೆರ್ಡೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ಇವರು, ತನ್ನ ವೈಯುಕ್ತಿಕ ಅಥವಾ ಇನ್ನಾವುದೋ ಕಾರಣದಿಂದ ಮಾನಸಿಕವಾಗಿ ನೊಂದು ಜೀವನದಲ್ಲಿ ಜಿಗುಪ್ಪೆ ಗೊಂಡು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ.

ಈ ಬಗ್ಗೆ ಹಿರಿಯಡ್ಕ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

add - Rai's spices
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments