HomeFresh Newsಉಡುಪಿ ತಾಲೂಕು ಮಟ್ಟದ ತ್ರೈಮಾಸಿಕ ಕೆ.ಡಿ.ಪಿ ಸಭೆ

ಉಡುಪಿ ತಾಲೂಕು ಮಟ್ಟದ ತ್ರೈಮಾಸಿಕ ಕೆ.ಡಿ.ಪಿ ಸಭೆ

ಕಾಪು:ಉಡುಪಿ ತಾಲೂಕು ಮಟ್ಟದ ತ್ರೈಮಾಸಿಕ ಕೆ.ಡಿ.ಪಿ ಸಭೆ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಇಂದು ದಿನಾಂಕ 15-06-2026 ರಂದು ಉಡುಪಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಸಭೆಯಲ್ಲಿ ವೈದ್ಯಕೀಯ ಹಿತದೃಷ್ಟಿಯಿಂದ ಬಿಪಿಎಲ್ ಪಡಿತರ ಚೀಟಿಗಳನ್ನು ವಿಳಂಬ ಮಾಡದೆ ಶೀಘ್ರವೇ ಒದಗಿಸಿಕೊಡುವ ಬಗ್ಗೆ ತಿಳಿಸಿ ಮಳೆಗಾಲ ಆರಂಭವಾಗಿದ್ದು ರಸ್ತೆಯಲ್ಲಿನ ನೀರು ಸರಾಗವಾಗಿ ಹರಿದು ಹೋಗಲು ಚರಂಡಿ ನಿರ್ಮಾಣ ಹಾಗೂ ಚರಂಡಿಗಳಲ್ಲಿನ ಹುಲ್ಲು ಮತ್ತು ಹೂಳು ವಿಲೇವಾರಿಗೊಳಿಸುವಂತೆ ಲೋಕೋಪಯೋಗಿ ಇಲಾಖೆ ಮತ್ತು ಪಂಚಾಯತ್ ರಾಜ್ ಇಲಾಖಾಧಿಕಾರಿಗಳಿಗೆ ಸೂಚಿಸಿ ಶಿಥಿಲಗೊಂಡಿರುವ ಸರಕಾರಿ ಶಾಲೆಗಳನ್ನು ಗುರುತಿಸಿ ಅಂತಹ ಶಾಲೆಗಳ ದುರಸ್ತಿಗೆ ಅಗತ್ಯ ಪ್ರಸ್ತಾವನೆ ಸರ್ಕಾರಕ್ಕೆ ಸಲ್ಲಿಸುವಂತೆ ಇಲಾಖಾಧಿಕಾರಿಗಳಿಗೆ ತಿಳಿಸಿ ಮುಂಗಾರು ಮಳೆ ಆರಂಭವಾಗಿದ್ದು ರೈತರ ಬೇಡಿಕೆಗೆಗೆ ಅನುಗುಣವಾಗಿ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳನ್ನು ಪೂರೈಸುವಂತೆ ಕೃಷಿ ಇಲಾಖಾಧಿಕಾರಿಗಳಿಗೆ ಸೂಚಿಸಲಾಯಿತು.

ಈ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ಉಡುಪಿ ತಾಲೂಕು ಪಂಚಾಯತ್ ಆಡಳಿತಾಧಿಕಾರಿಗಳಾದ ಉದಯ್ ಕುಮಾರ್ ಶೆಟ್ಟಿ, ಉಡುಪಿ ತಾಲೂಕು ಕಾರ್ಯನಿರ್ವಹಣಾಧಿಕಾರಿಗಳಾದ ವಿಜಯ, ತಹಶೀಲ್ದಾರರಾದ ಗುರುರಾಜ್, ಉಡುಪಿ ನಗರ ಸಭೆಯ ಪೌರಾಯುಕ್ತದಾರ ಮಹಾಂತೇಶ್ ಹಾಗೂ ಉಡುಪಿ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Top egg exporting country | Top egg importing country
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments