HomeFresh Newsಉಡುಪಿ ಉಚ್ಚಿಲ ದಸರಾ: ಅ. 21ರಂದು ವಾಹನ ಸಂಚಾರ ಮಾರ್ಗ ಬದಲಾವಣೆ

ಉಡುಪಿ ಉಚ್ಚಿಲ ದಸರಾ: ಅ. 21ರಂದು ವಾಹನ ಸಂಚಾರ ಮಾರ್ಗ ಬದಲಾವಣೆ

ಕಾಪು, ಅ. 19: ಉಡುಪಿ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ದಸರಾ ಮಹೋತ್ಸವದ ಭವ್ಯ ಶೋಭಾಯಾತ್ರೆ ಹಿನ್ನೆಲೆಯಲ್ಲಿ ಅಕ್ಟೋಬರ್ 21ರಂದು ಮಧ್ಯಾಹ್ನ 3ರಿಂದ ರಾತ್ರಿ 11ರವರೆಗೆ ಭಾರೀ ವಾಹನಗಳ ಸಂಚಾರಕ್ಕೆ ಮಾರ್ಗ ಬದಲಾವಣೆ ಮಾಡಲಾಗಿದೆ.
ಪರ್ಯಾಯ ಮಾರ್ಗಗಳ ವಿವರ:
ಉಡುಪಿಯಿಂದ ಮಂಗಳೂರು ಕಡೆಗೆ: ಕಟಪಾಡಿ–ಶಿರ್ವ–
ಬೆಳ್ಮಣ್–ಪಡುಬಿದ್ರಿ ಮಾರ್ಗವಾಗಿ ಸಂಚರಿಸಬೇಕು.
ಉಡುಪಿಯಿಂದ ಬಜ್ಪೆ ವಿಮಾನ ನಿಲ್ದಾಣಕ್ಕೆ: ಕಟಪಾಡಿ–ಶಿರ್ವ–ಬೆಳ್ಮಣ್–ಮುಂಡ್ಕೂರು ಮಾರ್ಗವಾಗಿ ತೆರಳಬೇಕು.
ಟ್ರಕ್, ಲಾರಿ ಹಾಗೂ ಟ್ಯಾಂಕರ್‌ಗಳು: ಕುಂದಾಪುರ ಮತ್ತು ಉಡುಪಿ ಭಾಗಗಳ ಟ್ರಕ್ ಬೇಗಳಲ್ಲಿ ರಾತ್ರಿ 9ರವರೆಗೆ ನಿಲುಗಡೆ ಮಾಡಿ ಬಳಿಕ ಪ್ರಯಾಣ ಮುಂದುವರಿಸಬೇಕು.
ಉಡುಪಿಯಿಂದ ಬೆಂಗಳೂರಿಗೆ ತೆರಳುವ ರಾತ್ರಿ ಬಸ್‌ಗಳು: ರಾತ್ರಿ 9 ಗಂಟೆಯ ನಂತರ ಪ್ರಯಾಣ ಆರಂಭಿಸುವಂತೆ ಸೂಚಿಸಲಾಗಿದೆ.
ಮಂಗಳೂರು–ಉಡುಪಿ ಮಾರ್ಗದಲ್ಲಿ ಭಾರೀ ವಾಹನಗಳ ಸಂಚಾರಕ್ಕೂ ಮಧ್ಯಾಹ್ನ 3ರಿಂದ ರಾತ್ರಿ 11ರವರೆಗೆ ನಿರ್ಬಂಧವಿರಲಿದೆ. ವಾಹನ ಸವಾರರು ಪರ್ಯಾಯ ಮಾರ್ಗಗಳನ್ನು ಅನುಸರಿಸಿ, ಪೊಲೀಸ್ ಇಲಾಖೆಯ ಸೂಚನೆಗಳಿಗೆ ಸಹಕರಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments