ಉಡುಪಿಯ ಕೃಷ್ಣ ಮಠಕ್ಕೆ ಭಾರತ ಸರ್ಕಾರದ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಭೇಟಿ ನೀಡಿ ಶ್ರೀ ಕೃಷ್ಣನ ದರ್ಶನ ಪಡೆದರು.
ಕೃಷ್ಣನ ದರ್ಶನ ಪಡೆದ ಬಳಿಕ ಪರ್ಯಾಯ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಂದ ಫಲ ಮಂತ್ರಾಕ್ಷತೆ ಪಡೆದುಕೊಂಡರು.


ಈ ಸಂದರ್ಭದಲ್ಲಿ ಶೀರೂರು ಮಠದ ದಿವಾನರಾದ ಉದಯ ಕುಮಾರ್ ಸರಳತ್ತಾಯ. ಉಡುಪಿ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ , ದಕ್ಷಿಣ ಕನ್ನಡ ಜಿಲ್ಲಾ ಸಂಸದರಾದ ಬ್ರಿಜೇಶ್ ಚೌಟ ,ಉಡುಪಿ ಶಾಸಕ ಯಶ್ ಪಾಲ್ ಸುವರ್ಣ, ಬೈಂದೂರು ವಿಧಾನಸಭಾ ಶಾಸಕರಾದ ಗುರುರಾಜ್ ಗಂಟಿಹೊಳೆ, ಕುಂದಾಪುರ ಶಾಸಕ ಶ್ರೀ ಕಿರಣ್ ಕುಮಾರ್ ಕೊಡ್ಗಿ, ಬಿಜೆಪಿ ಉಡುಪಿ ಜಿಲ್ಲಾ ಅಧ್ಯಕ್ಷರಾದ ಕುತ್ಯಾರು ನವೀನ್ ಶೆಟ್ಟಿ, ಬಿಜೆಪಿ ಉಡುಪಿ ಜಿಲ್ಲಾ ವಕ್ತಾರ ಶ್ರೀ ಮಧುಕರ ಮುದ್ರಾಡಿ ಹಾಗೂ ಶ್ರೀಮತಿ ಶಿಲ್ಪಾ ಸುವರ್ಣ ಉಪಸ್ಥಿತರಿದ್ದರು.


