ಉಡುಪಿ ವಿಡಿಯೋ ಪ್ರಕರಣ ಸಮಗ್ರ ತನಿಖೆಗೆ ಒತ್ತಾಯಿಸಿ ವಿಹಿಂಪ, ಬಜರಂಗ ದಳದಿಂದ ಪ್ರತಿಭಟನೆ

ಉಡುಪಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೊ ಚಿತ್ರೀಕರಣ ಪ್ರಕರಣದ ಸಮಗ್ರ ತನಿಖೆಗೆ ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್ತ್, ಬಜರಂಗ ದಳ ಉಡುಪಿ ಜಿಲ್ಲಾ ಘಟಕದಿಂದ ಪ್ರತಿಭಟನಾ ಪಾದಯಾತ್ರೆ ನಡೆಸಿದರು.

ಬಳಿಕ ಬಹಿರಂಗ ಸಭೆ ನಡೆಯಿತು. ಕಲ್ಸಂಕದಿಂದ ಜೋಡುಕಟ್ಟೆ ತನಕ 700ಕ್ಕೂ ಅಧಿಕ ಪೊಲೀಸರು, 25ಕ್ಕೂಅಧಿಕ ವಾಹನಗಳನ್ನು ಬಿಗಿ ಬಂದೋಬಸ್ತ್‍ಗಾಗಿ ನಿಯೋಜಿಸಲಾಗಿತ್ತು.

ಉಡುಪಿ ಕಾಲೇಜಿನ ವಿಡಿಯೊ ಪ್ರಕರಣದಲ್ಲಿ ನಿಷೇಧಿತ ಪಿಎಫ್‍ಐ, ಸಿಎಫ್‍ಐ ಕೈವಾಡವಿದ್ದು ರಾಷ್ಟ್ರೀಯ ತನಿಖಾ ದಳ ದಿಂದ ಸಮಗ್ರ ತನಿಖೆ ನಡೆಸುವಂತೆ ವಿಶ್ವ ಹಿಂದೂ ಪರಿಷತ್ತಿನ ಕರ್ನಾಟಕ ದಕ್ಷಿಣ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್‍ವೆಲ್ ಒತ್ತಾಯಿಸಿದ್ದಾರೆ.

ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್, ಉಡುಪಿ ಶಾಸಕ ಯಶ್‍ಪಾಲ್ ಎ.ಸುವರ್ಣ, ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ, ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ರಶ್ಮಿ ಸಾಮಂತ್, ಬಿ. ಸುಪ್ರಸಾದ್ ಶೆಟ್ಟಿ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯ ಕುಮಾರ್ ಶೆಟ್ಟಿ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮನೋಹರ ಕಲ್ಮಾಡಿ, ಮುಂತಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಸ್ಥಳಕ್ಕೆ ಆಗಮಿಸಿದ ಎಸ್ಪಿ ಹಾಕೆ ಅಕ್ಷಯ್ ಮಚ್ಚೀಂದ್ರ ವಿಹಿಂಪ, ಬಜರಂಗದಳ ನಿಯೋಗದ ಮನವಿ ಸ್ವೀಕರಿಸಿದರು.

Related Posts

Leave a Reply

Your email address will not be published.