ಉಡುಪಿ: ಅ.28 ಮತ್ತು 29ರಂದು ವಿಶ್ವ ಬಂಟರ ಸಮ್ಮೇಳನ-2023

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಅ.28 ಮತ್ತು 29ರಂದು ವಿಶ್ವ ಬಂಟರ ಸಮ್ಮೇಳನ-2023 ಕ್ರೀಡಾ ಸಂಗಮ ಮತ್ತು ಸಾಂಸ್ಕೃತಿಕ ಸಂಭ್ರಮ ಉಡುಪಿಯಲ್ಲಿ ಅದ್ದೂರಿಯಾಗಿ ನಡೆಯಲಿದೆ ಎಂದು ಐಕಳ ಹರೀಶ್ ಶೆಟ್ಟಿ ಹೇಳಿದರು.

ಅವರು ಉಡುಪಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಅಕ್ಟೋಬರ್ 28ರಂದು ಬೃಹತ್ ಮೆರವಣಿಗೆ ಉದ್ಘಾಟನಾ ಸಮಾರಂಭ ನಡೆಯಲಿದೆ. ಬೆಳಿಗ್ಗೆ 9ಗಂಟೆಗೆ ಉಡುಪಿ ನಗರದ ಬೋರ್ಡ್ ಹೈಸ್ಕೂಲ್ ನಲ್ಲಿ ಬೃಹತ್ ಮೆರವಣಿಗೆಗೆ ಚಾಲನೆ ದೊರೆಯಲಿದೆ. ಮೆರವಣಿಗೆಯು ನಗರಸಭೆ, ಹಳೆ ಡಯನ ಬಿಗ್ ಬಜಾರ್ ಮೂಲಕ ಅಜ್ಜರಕಾಡು ಭುಜಂಗ ಪಾರ್ಕ್ ಮಾರ್ಗವಾಗಿ ಅಜ್ಜರಕಾಡು ಮೈದಾನವನ್ನು ಪ್ರವೇಶಿಸಲಿದೆ.ಅ.29 ರಂದು ಸಾಂಸ್ಕೃತಿಕ ವೈಭವ ಕಾರ್ಯಕ್ರಮ ನಡೆಯಲಿದ್ದು ಮೂವತ್ತಕ್ಕೂ ಹೆಚ್ಚು ತಂಡ ಭಾಗವಹಿಸಲಿದೆ.ಅಷ್ಟೇ ಅಲ್ಲದೇ ಹಲವು ಗೋಷ್ಟಿಗಳು ನಡೆಯಲಿದೆ ಎಂದರು.

ಇದೇ ವೇಳೆ ವಿವಿಧ ಸಸ್ಕೃತಿಕ ಹಾಗೂ ಕ್ರೀಡಾ ಸ್ಪರ್ಧೆಗಳ ವಿಜೇತರಿಗೆ ನೀಡುವ ಟ್ರೊಫಿಗಳ ಅನಾವರಣಗೊಂಡಿತು.

ಸುದ್ದಿಗೋಷ್ಠಿಯಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಕರ್ನಿರೆ ವಿಶ್ವನಾಥ ಶೆಟ್ಟಿ ಉಪಾಧ್ಯಕ್ಷರು, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಜಯಕರ ಶೆಟ್ಟಿ ಇಂದ್ರಾಳಿ ಪ್ರಧಾನ ಕಾರ್ಯದರ್ಶಿ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಚಂದ್ರಹಾಸ ಡಿ. ಶೆಟ್ಟಿ, ಜೊತೆ ಕಾರ್ಯದರ್ಶಿ ಹಾಗೂ ಸಂಚಾಲಕರು ವಿಶ್ವಬಂಟರ ಸಾಂಸ್ಕೃತಿಕ ವೈಭವ ಗಿರೀಶ್ ಶೆಟ್ಟಿ ತೆಳ್ಳಾರು ಸಂಚಾಲಕರು ವಿಶ್ವ ಬಂಟರ ಕ್ರೀಡಾಕೂಟ, ಡಾ. ರೋಶನ್ ಕುಮಾರ್ ಶೆಟ್ಟಿ, ಸಹಸಂಚಾಲಕರು ವಿಶ್ವ ಬಂಟರ ಕ್ರೀಡಾಕೂಟ ಉಪಸ್ಥಿತರಿದ್ದರು.

Related Posts

Leave a Reply

Your email address will not be published.