ಆಂಟಿ ಕಮ್ಯುನಲ್ ವಿಂಗ್ ಕಾರ್ಯವೈಖರಿಯನ್ನು ಸ್ಪಷ್ಟಪಡಿಸಲಿ: ಶಾಸಕ ಯಶ್ಪಾಲ್ ಸುವರ್ಣ

ರಾಜ್ಯ ಸರ್ಕಾರ ದಕ್ಷಿಣ ಕನ್ನಡ ಜಿಲ್ಲೆ ಕೇಂದ್ರವಾಗಿರಿಸಿ ಆಂಟಿ ಕಮ್ಯುನಲ್ ವಿಂಗ್ ಸ್ಥಾಪಿಸಲು ಹೊರಟಿದೆ. ಜನರಲ್ಲಿ ಭಯದ ವಾತಾವರಣ ನಿರ್ಮಾಣ ಮಾಡಲು ಮುಂದಾಗಿದೆ. ಇದರಿಂದ ಮಂಗಳೂರಿನಲ್ಲಿರುವ ಧಾರ್ಮಿಕ ಕೇಂದ್ರಗಳಿಗೆ ಬರುವ ಭಕ್ತರಲ್ಲಿ ಭಯದ ವಾತಾವರಣ ಸೃಷ್ಟಿಯಾಗುತ್ತದೆ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಆರೋಪಿಸಿದರು.
ವೈದ್ಯಕೀಯ ಕಾಲೇಜುಗಳಿಗೆ ಬರುವ ವಿದ್ಯಾರ್ಥಿಗಳ ಪೋಷಕರಲ್ಲಿ ಈ ವಿಂಗ್ ಆತಂಕಕ್ಕೆ ಕಾರಣವಾಗಲಿದೆ. ತಮ್ಮ ಮಕ್ಕಳನ್ನ ಕಾಲೇಜುಗಳಿಗೆ ಕಳುಹಿಸಲು ಹಿಂದೆ ಮುಂದೆ ನೋಡುವ ಪರಿಸ್ಥಿತಿ ಎದುರಾಗುತ್ತದೆ. ಸಿದ್ದರಾಮಯ್ಯ ಸರ್ಕಾರ ಅಭಿವೃದ್ಧಿಯನ್ನ ಬದಿಗಿಟ್ಟು ಒಂದು ಸಮುದಾಯದ ಓಲೈಕೆಗೆ ಮುಂದಾಗಿದೆ ಎಂದರು.
ಆಂಟಿ ಕಮ್ಯುನಲ್ ವಿಂಗ್ ಯಾವ ಚೌಕಟ್ಟಿನಲ್ಲಿ ಕೆಲಸ ಮಾಡಲಿದೆ ಎನ್ನುವುದನ್ನು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಬೇಕು. ಮತಾಂತರ ನಿಷೇಧ ಕಾನೂನು ಹಿಂಪಡೆಯುವ ಹೇಳಿಕೆ ಮರುಪರಿಶೀಲಸಬೇಕು ಎಂದು ಆಗ್ರಹಿಸಿದರು.