ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಣಿಪುರ ಹಿಂಸಾಚಾರ ಖಂಡಿಸಿ ಪ್ರತಿಭಟನೆ

ಮಣಿಪುರದಲ್ಲಿ ನಡೆದ ಹಿಂಸಾಚಾರವನ್ನು ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸುಧೀರ್ ಕುಮಾರ್ ಅವರು, ಮೈಥೇಯಿ-ಕುಕಿ-ನಾಗಾ ಸಮುದಾಯದಲ್ಲಿ ಎಷ್ಟು ಸಂಖ್ಯೆ ಇದೆ ಗೊತ್ತಿಲ್ಲ. ಚುನಾವಣೆ ಉದ್ದೇಶದಿಂದ ಬಿಜೆಪಿ ಸರ್ಕಾರ ಮೈಥೇಯಿ ಪರವಾಗಿ ನಿಂತಿದೆ.

ಬಿಜೆಪಿ ಮನುಷ್ಯ ವಿರೋಧಿ ನೀತಿ ಅನುಸರಿಸುತ್ತಿದೆ. ದೇಶದಲ್ಲಿ ದೌರ್ಜನ್ಯ ನಡೆಯುತ್ತಿರುವಾಗ ಮೋದಿ ವಿಶ್ವನಾಯಕನಾಗಲು ಸಾಧ್ಯವಿಲ್ಲ ಎಂದರು. ಇನ್ನು ಉಡುಪಿ ಕಾಲೇಜಿನ ವೀಡಿಯೋ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿ, ಬೀದಿಯಲ್ಲಿ ನಿಂತು ಪ್ರತಿಭಟನೆ ಮಾಡಿದ್ದರೂ ನಿಖರ ತನಿಖೆ ನಡೆಯುತ್ತಿದೆ. ತನಿಖೆ ನಡುವೆ ಶಾಸಕ ಯಶ್ಪಾಲ್ ಅವರು ಜಡ್ಜ್‍ಮೆಂಟ್ ಕೊಟ್ಟಿದ್ದಾರೆ. ಪೊಲೀಸರನ್ನು ಮೀರಿ ನೀವು ಜಡ್ಜ್‍ಮೆಂಟ್ ಕೊಡಬೇಡಿ. ನೈತಿಕತೆ ಇದ್ದರೆ ಮಣಿಪುರ ದೌರ್ಜನ್ಯವನ್ನು ನಿಲ್ಲಿಸಲು ಪ್ರಧಾನಿಗೆ ಹೇಳಿ ಎಂದು ವಾಗ್ಧಾಳಿ ನಡೆಸಿದರು.

Related Posts

Leave a Reply

Your email address will not be published.