ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ಉಡುಪಿ ವಲಯ ಮಟ್ಟದ ಕ್ರೀಡಾಕೂಟ
ಉಡುಪಿ: ಜಿಲ್ಲಾ ಪಂಚಾಯತ್ ಉಡುಪಿ ಶಾಲಾ ಶಿಕ್ಷಣ ಇಲಾಖೆ, ಉಡುಪಿ ಜಿಲ್ಲೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಉಡುಪಿ ವಲಯ ಹಾಗೂ ದಕ್ಷಿಣ ಕರ್ನಾಟಕ ಸುನ್ನಿ ಸೆಂಟರ್ (ರಿ) ಮಂಗಳೂರು ಅಧೀನ ಸಂಸ್ಥೆಯಾದ ಅಲ್-ಇಹ್ಸಾನ್ ಆಂಗ್ಲ ಮಾಧ್ಯಮ ಶಾಲೆ ಮೂಳೂರು ಇವರ ಸಂಯುಕ್ತ ಆಶ್ರಯದಲ್ಲಿ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾದ “ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ಉಡುಪಿ ವಲಯ ಮಟ್ಟದ ಕ್ರೀಡಾಕೂಟ 2025-26” ಕಾರ್ಯಕ್ರಮ ನಡೆಯಿತು.
ಈ ಕ್ರೀಡಾಕೂಟದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಎಂ.ಎ ಗಫೂರ್, ಕಾಪು ಪುರಸಭೆಯ ಅಧ್ಯಕ್ಷರಾದ ಹರೀಣಾಕ್ಷಿ ದೇವಾಡಿಗ ಹಾಗೂ ಗಣ್ಯರು ಉಪಸ್ಥಿತರಿದ್ದರು.

















