ಉದ್ಯಾವರದ ಪಿತ್ರೋಡಿಯಲ್ಲಿ ವ್ಯಕ್ತಿಯ ಕೊಲೆ

ಉದ್ಯಾವರ ಸಮೀಪದ ಪಿತ್ರೋಡಿಯಲ್ಲಿ ನಿನ್ನೆ ರಾತ್ರಿ ಮದ್ಯದ ನಶೆಯಲ್ಲಿ ವ್ಯಕ್ತಿಗಳಿಬ್ಬರ ನಡುವೆ ಉಂಟಾದ ಜಗಳ ಒಬ್ಬನ ಕೊಲೆಯಲ್ಲಿ ಅಂತ್ಯವಾಗಿದೆ. ಮೃತರನ್ನು ಪಿತ್ರೋಡಿ ನಿವಾಸಿ ದಯಾನಂದ (40) ಎಂದು ಗುರುತಿಸಲಾಗಿದೆ. ಕೊಲೆ ಆರೋಪಿ ಭರತ್ ನನ್ನು ಕಾಪು ಪೊಲೀಸ್ರು ಬಂಧಿಸಿದ್ದಾರೆ

ನಿನ್ನೆ ರಾತ್ರಿ ಉದ್ಯಾವರ ಪಿತ್ರೋಡಿ ಹಳೆ ಸಿಂಡಿಕೇಟ್ ಬ್ಯಾಂಕ್ ಬಳಿಯ ಬಾರ್ ಒಂದರಲ್ಲಿ ಕ್ಷುಲ್ಲಕ ವಿಚಾರಕ್ಕೆ ದಯಾನಂದ ಹಾಗೂ ಭರತ್ ಮಧ್ಯೆ ಮಾತಿಗೆ ಮಾತು ಬೆಳೆದಿದೆ. ಬಳಿಕ ಬಾರ್ ನಿಂದ ಹೊರಗೆ ಬಂದ ನಂತರ ಜಗಳ ತೀವ್ರ ವಿಕೋಪಕ್ಕೆ ತಿರುಗಿದ್ದು, ಈ ವೇಳೆ ಭರತ್ ತನ್ನ ಕೈ ಬೆರಳಿನಲ್ಲಿ ಇದ್ದ ಕಬ್ಬಿಣದ ಪಂಚ್ ನಿಂದ ದಯಾನಂದ ಮುಖ ಹಾಗೂ ಕೆನ್ನೆಯ ಭಾಗಕ್ಕೆ ಬಲವಾಗಿ ಜಜ್ಜಿ ಬಳಿಕ ತಲೆಗೆ ಹೊಡೆದಿದ್ದಾನೆ ಎನ್ನಲಾಗಿದೆ. ತೀವ್ರವಾಗಿ ಗಾಯಗೊಂಡ ದಯಾನಂದನನ್ನು ಸ್ಥಳೀಯರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಆರೋಪಿ ಭರತ್ ಘಟನೆಯ ಅನಂತರ ಸ್ಥಳದಿಂದ ನಾಪತ್ತೆಯಾಗಿದ್ದು, ಸ್ಥಳೀಯರ ಸಹಕಾರದಿಂದ ಪೊಲೀಸ್ರು ಆತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Related Posts

Leave a Reply

Your email address will not be published.