ಉದ್ಯಾವರ ಮಹತೋಭಾರ ಶ್ರೀ ಸಿದ್ಧಿವಿನಾಯಕ ದೇವಸ್ಥಾನ : ಪರಿವಾರ ದೈವಗಳಿಗೆ ಸಿರಿ ಸಿಂಗಾರದ ನೇಮೋತ್ಸವ
ಉಡುಪಿ : ಉಡುಪಿ ಜಿಲ್ಲೆಯ ಉದ್ಯಾವರ ಮಹತೋಭಾರ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಪರಿವಾರ ದೈವಗಳಾದ ವಾರ್ತಾಳಿ ಪಾಶಾಣ ಕಲ್ಲುರ್ಟಿ ದೈವಗಳಿಗೆ ಬ್ರಹ್ಮಕಲಶೋತ್ಸವ, ರಾಶಿ ಪೂಜೆ ಮತ್ತು ಸಿರಿ ಸಿಂಗಾರದ ನೇಮೋತ್ಸವದ ಪ್ರಯುಕ್ತ ಬೆಳಿಗ್ಗೆ ನವಕ ಪ್ರಧಾನ ಕಲಶಾಭಿಷೇಕ ನಡೆದು ಸಾಮೂಹಿಕ ಪ್ರಾರ್ಥನೆಯೊಂದಿಗೆ ಭಂಡಾರ ಇಳಿದು ಮಧ್ಯಾಹ್ನ ಅನ್ನಸಂತರ್ಪಣೆ ಜರಗಿತು. ರಾತ್ರಿ ನೇಮೋತ್ಸವ ನಡೆಯಿತು.
ಈ ಸಂದರ್ಭ ದೇಗುಲದ ವ್ಯವಸ್ಥಾಪನ ಸಮಿತಿ ಮತ್ತು ಸಮಿತಿ ಅಧ್ಯಕ್ಷ ಯು.ಎ. ಪ್ರಭಾಕರ ರಾವ್, ಜೀರ್ಣೋದ್ಧಾರ ಸಮಿತಿಯ ಕಾರ್ಯಾಧ್ಯಕ್ಷ ಕಿದಿಯೂರು ಉದಯ ಕುಮಾರ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಯು. ಸುರೇಶ ಆಚಾರ್ಯ, ಕೋಶಾಧಿಕಾರಿ ಶ್ರೀನಿವಾಸ ಯು.ಬಿ., ಪ್ರಧಾನ ಸಂಚಾಲಕ ಗಣಪತಿ ಕಾರಂತ್, ಪದಾಧಿಕಾರಿಗಳು, ದೇಗುಲದ ವ್ಯವಸ್ಥಾಪನ ಸಮಿತಿಯ ಶ್ರೀನಿವಾಸ ಯು.ಬಿ., ಸಂತೋಷ್ ಕುಮಾರ್, ಪಟೇಲರ ಮನೆಯ ಯತಿರಾಜ್ ಶೆಟ್ಟಿ, ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.
ಅದ್ದೂರಿಯಿಂದ ನಡೆದ ನೇಮೋತ್ಸವದಲ್ಲಿ ಭಕ್ತರು ಭಾಗವಹಿಸಿ ಶ್ರೀಗಂಧ ಪ್ರಸಾದ ಸ್ವೀಕರಿಸಿದರು