ಉಳ್ಳಾಲ : ಮಂಗಳೂರು ನಗರ ಹಾಗೂ ಉಡುಪಿ ಜಿಲ್ಲೆಯಲ್ಲಿ ಒಟ್ಟು 23 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಯೊಬ್ಬನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಇಮ್ರಾನ್ ಅಲಿಯಾಸ್ ಸುರ್ಮೋ ಇಮ್ರಾನ್ ಎಂದು ಗುರುತಿಸಲಾಗಿದೆ. ಈತನ ವಿರುದ್ಧ ಮಂಗಳೂರು ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಹಲವು ಪ್ರಕರಣಗಳು ದಾಖಲಾಗಿದ್ದು, ಕೆಲವು ಪ್ರಕರಣಗಳಲ್ಲಿ ನ್ಯಾಯಾಲಯದಿಂದ ವಾರಂಟ್ ಕೂಡ ಜಾರಿಯಾಗಿತ್ತು.
ವಾರಂಟ್ ಇದ್ದರೂ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ, ಪೊಲೀಸರಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ಬುರ್ಖಾ ಧರಿಸಿ ಸಂಚರಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಖಚಿತ ಮಾಹಿತಿಯ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಉಳ್ಳಾಲ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಬಂಧಿಸಿದ್ದಾರೆ.


