ಕೊರೊನಾಕ್ಕೆ ರಮ್ ಮದ್ದು ಎಂದಿದ್ದ ಕೌನ್ಸಿಲರ್ ರವಿಚಂದ್ರ ಗಟ್ಟಿ ಪಕ್ಷದಿಂದ ಅಮಾನತು

ಉಳ್ಳಾಲ: `ರಮ್ ಕುಡಿದು ಪೆಪ್ಪರ್ ಹಾಕಿ ಮೊಟ್ಟೆ ತಿಂದರೆ ಕೊರೊನಾ ದೂರವಾಗುತ್ತದೆ’ ಎಂದು ಹೇಳಿ ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ವೈರಲ್ ಆಗಿ ದೇಶಾದ್ಯಂತ ಸುದ್ಧಿಯಾದ ಉಳ್ಳಾಲ ನಗರಸಭೆ ಕಾಂಗ್ರೆಸ್ ಕೌನ್ಸಿಲರ್ ರವಿಚಂದ್ರ ಗಟ್ಟಿ ಇವರನ್ನು ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಮುಂದಿನ ಆದೇಶದವರೆಗೆ ಅಮಾನತುಗೊಳಿಸಲಾಗಿದೆ ಎಂದು ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಕಮಿಟಿ ಆದೇಶ ಹೊರಡಿಸಿದೆ. ಮೊನ್ನೆ ನಡೆದ ಉಳ್ಳಾಲ ನಗರಸಭೆಯ ಸ್ಥಾಯಿಸಮಿತಿ ಅಧ್ಯಕ್ಷರ ಆಯ್ಕೆಯಂದೂ ಸಭೆಯಲ್ಲಿ ಭಾಗವಹಿಸದೆ ಪಕ್ಷದ ವಿರುದ್ಧ ಹೇಳಿಕೆಗಳನ್ನು ನೀಡಿ ಪಕ್ಷದ ತತ್ವ ಸಿದ್ಧಾಂತಗಳನ್ನು ಉಲ್ಲಂಘಿಸಿರುತ್ತೀರಿ. ಆದುದರಿಂದ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನುತಗೊಳಿಸಲಾಗುತ್ತಿದೆ ಎಂದು ಬ್ಲಾಕ್ ಅಧ್ಯಕ್ಷ ಸದಾಶಿವ ಉಳ್ಳಾಲ್ ಆದೇಶ ಹೊರಡಿಸಿದ್ದಾರೆ.