ಹೋಮದ ಹೊಗೆಯ ಲಾಭ ಗಳಿಸಿ ಮನೆ ಕಳವು ನಡೆಸಿದ ಕಳ್ಳ ಕೋಟೆಕಾರಿನಲ್ಲಿ ಗೃಹಪ್ರವೇಶದ ದಿನವೇ ನಡೆದ ಘಟನೆ

ಉಳ್ಳಾಲ: ಗೃಹಪ್ರವೇಶದ ಮನೆಯಲ್ಲಿ ಪೂಜಾ ಸಂದರ್ಭದಲ್ಲೇ ಎಲ್ಲರ ಮುಂದೆ ಕಳವು ನಡೆಸಿದ ಕಳ್ಳನೋರ್ವ, ಅದೇ ರಾತ್ರಿ ನೆರೆಮನೆಯಿಂದಲೂ ಲಕ್ಷಾಂತರ ಮೌಲ್ಯದ ನಗನಗದು ದೋಚಿದ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೋಟೆಕಾರು ಬಳಿ ನಡೆದಿದೆ.

ಡಿ.10 ರಂದು ರಾತ್ರಿ ಸ್ಮಿತಾ-ದಾಮೋದರ್ ದಂಪತಿ ಕೋಟೆಕಾರು ಪಟ್ಟಣ ಪಂ. ವ್ಯಾಪ್ತಿಯ ಅಡ್ಕ ಬೈಲು ಎಂಬಲ್ಲಿ ತಾವು ನಿರ್ಮಸಿದ ನೂತನ ಮನೆಯಲ್ಲಿ ವಾಸ್ತು ಹೋಮ ನೆರವೇರಿಸಿದ್ದರು.ವಾಸ್ತು ಹೋಮ ನಡೆಯುತ್ತಿರುವಾಗಲೇ ಎಲ್ಲರ ಸಮ್ಮುಖದಲ್ಲೇ ಹೋಮದ ಹೊಗೆಯ ಲಾಭ ಎತ್ತಿ ಒಳ ನುಗ್ಗಿದ್ದ ಬರ್ಮುಡ ಧಾರಿ ಯುವಕನೋರ್ವ ಕೋಣೆಯೊಳಗೆ ನುಗ್ಗಿ ಬ್ಯಾಗಲ್ಲಿದ್ದ ರೂ.15,000 .ನಗದು, ಮೊಬೈಲ್ ಚಾರ್ಜರ್ ಮತ್ತು ಬೆಲೆ ಬಾಳುವ ಕಾಸ್ಮೆಟಿಕ್ಸ್ ಕಳವು ನಡೆಸಿದ್ದಾನೆ.ಕಳ್ಳ ಹೋಮ ನಡೆಯುತ್ತಿದ್ದ ವೇಳೆ ಮನೆಯೊಳಗಿನ ಕೋಣೆಗೆ ನುಗ್ಗಿ ಹೊರನಡೆಯುವ ದೃಶ್ಯ ವೃತ್ತಿಪರ ಕ್ಯಾಮೆರ ಮೆನ್ ನ ವೀಡಿಯೋದಲ್ಲಿ ದಾಖಲಾಗಿದೆ.

ಅದೇ ದಿನ ಮಧ್ಯ ರಾತ್ರಿ ಅಲ್ಲೇ ಸಮೀಪದ ಶಿವ ಸುಬ್ರಹ್ಮಣ್ಯ ಪ್ರಸಾದ್ ಭಟ್ ಎಂಬವರ ಮನೆಗೂ ರಾತ್ರಿ ಕನ್ನ ಹಾಕಿದ್ದ ಕಳ್ಳ ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಗಿಲನ್ನ ಒಡೆದು ಕೋಣೆಯೊಳಗಿನ ಕಪಾಟಲ್ಲಿದ್ದ 11,000 ರೂ.ನಗದು,32 ಗ್ರಾಂ ಚಿನ್ನ ,8 ಬೆಳ್ಳಿಯ ನಾಣ್ಯ,ಮತ್ತು 3 ರೇಡೋ ವಾಚ್ ಗಳು ಸೇರಿ ಒಟ್ಟು 1,49000 ರೂಪಾಯಿ ಮೌಲ್ಯದ ನಗ,ನಗದನ್ನ ಕದ್ದೊಯ್ದಿದ್ದಾನೆ.

ಬರ್ಮುಡ ಧಾರಿ ಕಳ್ಳನ ಜತೆ ಇನ್ನೋರ್ವನು ಇದ್ದು ಇವರಿಬ್ಬರು ಡಿ.10 ರ ರಾತ್ರಿ ಕಳ್ಳತನ ನಡೆದಿದ್ದ ಪ್ರದೇಶ ಅಡ್ಕ ಬೈಲಿಗೆ ದ್ವಿಚಕ್ರ ವಾಹನದಲ್ಲಿ ಬರುವ ದೃಶ್ಯ ಸಿ.ಸಿಟಿವಿಯಲ್ಲಿ ಸೆರೆಯಾಗಿದೆ.ಉಳ್ಳಾಲ ಪೊಲೀಸ್ರು ಪ್ರಕರಣ ದಾಖಲಿಸಿದ್ದು ವೀಡಿಯೋ ಫೂಟೇಜ್ ಆಧಾರದಲ್ಲಿ ಕಳ್ಳರ ಶೋಧ ಕಾರ್ಯ ನಡೆಸುತ್ತಿದ್ದಾರೆ.

Related Posts

Leave a Reply

Your email address will not be published.