ಉಳ್ಳಾಲ ; ಕುಮ್ಕಿ ಜಮೀನಿನಿಂದ ಮರಗಳ ಕಡಿದುಅಕ್ರಮ ಸಾಗಾಟ

ಉಳ್ಳಾಲ: ಕೋಟೆಕಾರು ಪಟ್ಟಣ ಪಂಚಾಯಿತಿಗೆ ಒಳಪಟ್ಟ ಕುಮ್ಕಿ ಜಮೀನಿನಲ್ಲಿ ಮರಗಳನ್ನು ಕಡಿದು ಅಕ್ರಮವಾಗಿ ಸಾಗಿಸುತ್ತಿರುವ ಕುರಿತು ದ.ಕ ಜಿಲ್ಲಾಧಿಕಾರಿಗಳಿಗೆ ಸ್ಥಳೀಯರು ದೂರು ನೀಡಲಾಗಿದೆ. ಬಗಂಬಿಲದ ಸರ್ವೇ ನಂ. 301/3 ರಲ್ಲಿರುವ ಕುಮ್ಕಿ ಜಮೀನಿಗೆ ಹಕ್ಕುದಾರರಾಗಿರುವ ವ್ಯಕ್ತಿ ಸೇರಿದಂತೆ ಮೂವರು ದೂರು ಸಲ್ಲಿಸಿದ್ದಾರೆ. ಸ್ಥಳೀಯಾಡಳಿತ ಕುಮ್ಕಿ ಜಮೀನನ್ನು ಉಳ್ಳಾಲ ಪುರಸಭೆಗೆ ನೀಡುವ ಬಗ್ಗೆ ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಆಕ್ಷೇಪಣೆಯನ್ನು ವಕೀಲರ ಮೂಲಕ ಸಲ್ಲಿಸಲಾಗಿದೆ.
ಈ ನಡುವೆ ವ್ಯಾಜ್ಯ ಇತ್ಯರ್ಥವಾಗುವ ಮೊದಲೇ ಉಳ್ಳಾಲ ಪುರಸಭೆ ಏಕಾಏಕಿ ಅಕ್ರಮವಾಗಿ ಮರಗಳನ್ನು ಕಡಿದು ಸಾಗಿಸಲಾಗುತ್ತಿದೆ. ಮರಗಳನ್ನು ಕಡಿಯಲು ಅರಣ್ಯ ಇಲಾಖೆಯವರ ಅನುಮತಿ ಪಡೆಯದೇ ಇರುವುದು ಕಂಡುಬಂದಿದೆ. ಈ ಬಗ್ಗೆ ಸ್ಥಳೀಯ ಕಂದಾಯ ಅಧಿಕಾರಿಗಳು ಹಾಗೂ ಭೂಮಾಫಿಯಾ ಕೈಜೋಡಿಸಿರುವ ಸಂಶಯವಿದೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತದೊಂದಿಗೆ, ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲಿಸಿ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷಿಸಿ ನ್ಯಾಯ ದೊರಕಿಸಿಕೊಡಬೇಕೆಂದು ದೂರಿನಲ್ಲಿ ಸಲ್ಲಿಸಿದ್ದಾರೆ. ಕೋಟೆಕಾರು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ, ಗ್ರಾಮಕರಣಿಕರು ಹಾಗೂ ಎನ್ ಇಸಿಎಫ್ ಮಂಗಳೂರು ಇವರಿಗೆ ದೂರನ್ನು ಸಲ್ಲಿಸಲಾಗಿದೆ.
