ಉಳ್ಳಾಲ: ಕೆ ಎಸ್ ಆರ್ ಪಿ ಪೇದೆ ಆತ್ಮಹತ್ಯೆ

ಅಸೈಗೋಳಿ ಕೆ ಎಸ್ ಆರ್ ಪಿಯ ಏಳನೇ ಬೆಟಾಲಿಯನ್ ನ ನೂತನ ಬ್ಯಾಚ್ ನ ಪೊಲೀಸ್ ಪೇದೆ ಬಾಡಿಗೆ ರೂಮಿನಲ್ಲಿ ಆತ್ಮಹತ್ಯೆ ನಡೆಸಿಕೊಂಡಿರುವ ಘಟನೆ ಅಸೈಗೋಳಿ ಸೈಟ್ ನಲ್ಲಿ ಇಂದು ಸಂಜೆ ಬೆಳಕಿಗೆ ಬಂದಿದೆ.

ಬೆಳಗಾಂ ನಿವಾಸಿ ವಿಮಲನಾಥ ಜೈನ್ (28) ಆತ್ಮಹತ್ಯೆ ಮಾಡಿಕೊಂಡವರು. ತಿಂಗಳ ಹಿಂದಷ್ಟೇ ತಾಯಿ ತೀರಿಕೊಂಡ ನಂತರ ದು:ಖದಲ್ಲಿದ್ದ ಅವರು ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದರು. ನೂತನ ಬ್ಯಾಚ್ ನವರಾಗಿದ್ದ ವಿಮಲನಾಥ್ ಇಂದು ಕರ್ತವ್ಯಕ್ಕೆ ಹಾಜರಾಗದೇ ಬಾಡಿಗೆ ರೂಮಿನಲ್ಲಿ ಕೃತ್ಯ ಎಸಗಿದ್ದಾರೆ. ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Posts

Leave a Reply

Your email address will not be published.