ತಲಪಾಡಿ:ಕೇರಳದಿಂದ ಸಾಗಾಟ ನಡೆಸುತ್ತಿದ್ದ : ದಾಖಲೆರಹಿತ ರೂ. 7,095,000 ,ವಶಕ್ಕೆ

ಉಳ್ಳಾಲ: ಕೇರಳದಿಂದ ದಾಖಲೆಗಳಿಲ್ಲದೆ ಹಣ ಸಾಗಾಟ ನಡೆಸುತ್ತಿದ್ದ ಕಾರನ್ನು ತಡೆಹಿಡಿದ ಉಳ್ಳಾಲ ಪೆÇಲೀಸರು, ಕಾರಿನಲ್ಲೊದ್ದ ರೂ. 7,095,000 ನಗದು ಸಹಿತ ಕಾರನ್ನು ವಶಪಡಿಸಿಕೊಂಡಿದ್ದಾರೆ. ಕಾಸರಗೋಡು ಕುತ್ರಿಕ್ಕೋಡು ನಿವಾಸಿ ಸುರೇಶ್ ಎಂಬವರಲ್ಲಿದ್ದ ದಾಖಲೆ ರಹಿತ ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಉಳ್ಳಾಲ ಪೆÇಲೀಸರು ಕೇರಳ ಗಡಿಭಾಗ ತಲಪಾಡಿಯಲ್ಲಿ ವಾಹನ ತಪಾಸಣೆಗೈಯ್ಯುತ್ತಿದ್ದಾಗ ನಗದು ಪತ್ತೆಯಾಗಿದೆ. ಚುನಾವಣಾ ಆಯೋಗದ ರಿಟೈನಿಂಗ್ ಅಧಿಕಾರಿಗಳಿಗೆ ನಗದು ಹಾಗೂ ಕಾರನ್ನು ವಿಚಾರಣೆಗೆ ನೀಡಲಾಗಿದೆ. ಸುರೇಶ್ ಅವರು ಫ್ಯಾಬ್ರಿಕೇಷನ್ ವೃತ್ತಿ ನಡೆಸುವವರಾಗಿದ್ದು, ಮಂಗಳೂರಿನ ಬಂದರಿನಿಂದ ಸಾಮಗ್ರಿಗಳ ಖರೀದಿಗಾಗಿ ಹಣ ತರುತ್ತಿದ್ದರು ಎಂದು ಪ್ರಾಥಮಿಕ ವಿಚಾರಣೆ ವೇಳೆ ತಿಳಿಸಿದ್ದಾರೆ. ಚುನಾವಣೆಗೆ ಸಂಬಂಧಿಸಿದ ಹಣವಾದಲ್ಲಿ ಪ್ರಕರಣ ದಾಖಲಿಸುವುದಾಗಿ ಪೆÇಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Related Posts

Leave a Reply

Your email address will not be published.