ಪಿಲಾರು, ಮಳೆ ನೀರಿಗೆ ಬಿದ್ದುಉಸಿರುಗಟ್ಟಿ ಸಾವು : ಮೃತರ ಮನೆಮಂದಿಗೆ ರೂ.5 ಲಕ್ಷ ಪರಿಹಾರ

ಉಳ್ಳಾಲ: ಮಳೆ ನೀರಿಗೆ ಬಿದ್ದು ಸಾವನ್ನಪ್ಪಿದ ಸೋಮೇಶ್ವರ ಪಿಲಾರು ಬಳಿಯ ಬಾಡಿಗೆ ಮನೆ ನಿವಾಸಿ ಸುರೇಶ್ ಗಟ್ಟಿ (52) ಕುಟುಂಬಸ್ಥರಿಗೆ ಪ್ರಾಕೃತಿಕ ವಿಕೋಪದಡಿ ರೂ.5 ಲಕ್ಷ ಪರಿಹಾರವನ್ನು ಕಂದಾಯ ಇಲಾಖೆಯು ಖಜಾನೆ 2 ಮುಖೇನ ನೀಡಿದೆ.

ಘಟನಾ ಸ್ಥಳಕ್ಕೆ ತಹಶೀಲ್ದಾರ್ ಪ್ರಭಾಕರ್ ಖರ್ಜುರೆ,. ಕಂದಾಯ ನಿರೀಕ್ಷಕರು ಮಂಜುನಾಥ್ ಕೆ.ಹೆಚ್, ಪುರಸಭೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಶವಮಹಜರು ವರದಿಯನ್ನು ಸಂಗ್ರಹಿಸಿ, ಮೃತ ಪ್ರಮಾಣ ಪತ್ರವನ್ನು ಸರಕಾರಕ್ಕೆ ತಲುಪಿಸಿ ಪರಿಹಾರ ಧನವನ್ನು ಖಜಾನೆ 2 ಮುಖೇನ ಪತ್ನಿ ಶಾಂಭ ಅವರಿಗೆ ನೀಡಿದೆ

Related Posts

Leave a Reply

Your email address will not be published.