ಮಂಗಳೂರು : ಮಳೆಯ ಅಬ್ಬರಕ್ಕೆ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ಘೋಷಣೆ

ಮಳೆ ನೀರಿಗೆ ಬಿದ್ದು ಸಾವನ್ನಪ್ಪಿದ ಸೋಮೇಶ್ವರ ಪಿಲಾರು ಬಳಿಯ ನಿವಾಸಿ ಸುರೇಶ್ ಗಟ್ಟಿ (52) ಕುಟುಂಬಸ್ಥರಿಗೆ ಪ್ರಾಕೃತಿಕ ವಿಕೋಪದಡಿ ರೂ.5 ಲಕ್ಷ ಪರಿಹಾರವನ್ನು ಕಂದಾಯ ಇಲಾಖೆಯು ನೀಡಿದೆ.

ಘಟನಾ ಸ್ಥಳಕ್ಕೆ ತಹಶೀಲ್ದಾರ್ ಪ್ರಭಾಕರ್ ಖರ್ಜುರೆ, ಕಂದಾಯ ನಿರೀಕ್ಷಕರು ಮಂಜುನಾಥ್ ಕೆ.ಹೆಚ್, ಪುರಸಭೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಶವಮಹಜರು ವರದಿಯನ್ನು ಸಂಗ್ರಹಿಸಿ, ಮೃತ ಪ್ರಮಾಣ ಪತ್ರವನ್ನು ಸರಕಾರಕ್ಕೆ ತಲುಪಿಸಿ ಪರಿಹಾರ ಧನವನ್ನು ಪತ್ನಿ ಶಾಂಭ ಅವರಿಗೆ ನೀಡಿದ್ದಾರೆ.