HomeFresh Newsಉಳ್ಳಾಲ : ಸಿಡಿಲು ಬಡಿದು ಅಂಗಡಿ ಭಸ್ಮ

ಉಳ್ಳಾಲ : ಸಿಡಿಲು ಬಡಿದು ಅಂಗಡಿ ಭಸ್ಮ

ಉಳ್ಳಾಲ: ಭಾರೀ ಸಿಡಿಲು ಮಳೆಗೆ ಅಂಗಡಿ ಸಂಪೂರ್ಣವಾಗಿ ಸುಟ್ಟುಹೋಗಿ ಲಕ್ಷಾಂತರ ನಷ್ಟ ಸಂಭವಿಸಿರುವ ಘಟನರ ರಾಣಿಪುರದಲ್ಲಿ ಸಂಭವಿಸಿದೆ.ಕಟ್ಟಡದಲ್ಲೇ ಇದ್ದ ಮನೆಗೂ ಬೆಂಕಿ ವ್ಯಾಪಿಸಿದ್ದು ಸ್ಥಳಕ್ಕೆ ತಕ್ಷಣ ಬಂದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ಮುನ್ನೂರು ಗ್ರಾಮದ ರಾಣಿಪುರ ಚರ್ಚ್ ಎದುರಿನ ಪೀಟರ್ ಆಫ್ರೋಸ್ ಎಂಬವರ ದಿನಸಿ ಅಂಗಡಿಗೆ ಸಿಡಿಲು ಬಡಿದು ಭಸ್ಮವಾಗಿದೆ. ಇಂದು ಮುಂಜಾನೆ ನಸುಕಿನ ವೇಳೆ ಸಿಡಿಲು ಬಡಿದು ಘಟನೆ ಸಂಭವಿಸಿದೆ. ಘಟನೆ ವೇಳೆ ಪೀಟರ್ ತನ್ನ ಪತ್ನಿ ಅಸುಂತ ಮರಿಯ ಡಿಕ್ರೂಜ್ ಮತ್ತು ಮಗ ಪ್ರೀತಮ್ ಜೊತೆ ಮನೆಯಲ್ಲಿ ನಿದ್ರಿಸುತ್ತಿದ್ದರು. ಅಂಗಡಿಗೆ ಬೆಂಕಿ ಬಿದ್ದಿರುವುದನ್ನು ಕಂಡು ದಾರಿಯಲ್ಲಿ ತೆರಳುತ್ತಿದ್ದ ವ್ಯಕ್ತಿಯೋರ್ವರು ಮನೆ ಮಂದಿಗೆ ತಿಳಿಸಿದ್ದಾರೆ. ತಕ್ಷಣ ಎಚ್ಚೆತ್ತ ಪೀಟರ್ ಕುಟುಂಬ ಅಗ್ನಿ ಶಾಮಕದಳಕ್ಕೆ ಕರೆ ಮಾಡಿದ್ದು ಸ್ಥಳಕ್ಕೆ ದೌಡಾಯಿಸಿದ ಸಿಬ್ಬಂದಿಗಳು ಮನೆಗೆ ವ್ಯಾಪಿಸುತ್ತಿದ್ದ ಬೆಂಕಿಯನ್ನ ನಂದಿಸಿದ್ದಾರೆ.

ಘಟನೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ದಿನಸಿ ದಾಸ್ತಾನು ಸುಟ್ಟು ಕರಕಲಾಗಿದ್ದು ಮೂರು ರೆಫ್ರಿಜರೇಟರ್ ಸುಟ್ಟಿವೆ.ಇಲೆಕ್ಟ್ರಾನಿಕ್ ಉಪಕರಣಗಳು ಕೆಟ್ಟು ಹೋಗಿವೆ. ಅಂಗಡಿ,ಮನೆ ಒಟ್ಟಿಗೆ ಇದ್ದು ಕಟ್ಟಡದ ಗೋಡೆ ಬಿರುಕು ಬಿಟ್ಟಿದೆ. ಸ್ಥಳಕ್ಕೆ ಮುನ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷ ವಿಲ್ಫ್ರೆಡ್ ಡಿ ಸೋಜ, ಮಾಜಿ ಉಪಾಧ್ಯಕ್ಷ ನವೀನ್ ಡಿ ಸೋಜಾ, ಕಂದಾಯ ನಿರೀಕ್ಷರು, ಗ್ರಾಮಲೆಕ್ಕಾಧಿಕಾರಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments