ಉಳ್ಳಾಲ: ನಿವೃತ್ತ ಯೋಧನಿಂದ ಮಹಿಳಾ ಪೇದೆಗೆ ಕಿರುಕುಳ

ಉಳ್ಳಾಲ: ಮಹಿಳಾ ಪೊಲೀಸ್ ಪೇದೆಗೆ ನಿವೃತ್ತ ಯೋಧನೋರ್ವ ಲೈಂಗಿಕ ಕಿರುಕುಳ ನೀಡಿರುವ ಘಟನೆ ಕುಂಪಲದ ಬಗಂಬಿಲ ಎಂಬಲ್ಲಿ ನಡೆದಿದೆ.

ಕೊಲ್ಯ ಕನೀರುತೋಟ ನಿವಾಸಿ, ಸದ್ಯ ಕುಂಪಲ ಅಮೃತನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುವ ಪ್ರಶಾಂತ್ (45) ಕಿರುಕುಳ ನೀಡಿದಾತ. ಠಾಣೆಯೊಂದರ ಮಹಿಳಾ ಪೇದೆ ಸ್ಕೂಟರಿನಲ್ಲಿ ಕರ್ತವ್ಯಕ್ಕೆ ತೆರಳುತ್ತಿದ್ದ ಸಂದರ್ಭ ಅಡ್ಡಗಟ್ಟಿದ ನಿವೃತ್ತ ಯೋಧ ಪ್ರಶಾಂತ್, ಆಕೆ ಮೈಮೇಲೆ ಕೈ ಹಾಕಿ ಲೈಂಗಿಕ ಕಿರುಕುಳ ನೀಡಿದ್ದಾನೆ. ತಕ್ಷಣ ಬೊಬ್ಬಿಟ್ಟಾಗ ಸ್ಥಳೀಯರು ಜಮಾಯಿಸಿ ನಿವೃತ್ತ ಯೋಧನನ್ನು ಹಿಡಿದು ಉಳ್ಳಾಲ ಪೊಲೀಸರಿಗೆ ಒಪ್ಪಿಸಿದ್ದಾರೆ.

ಯೋಧನ ವಿರುದ್ಧ ಹಲವು ಪ್ರಕರಣಗಳು!

ಉಳ್ಳಾಲ ಪೊಲೀಸ್ ಠಾಣೆಯಲ್ಲಿ ನಿವೃತ್ತ ಯೋಧ ಪ್ರಶಾಂತ್ ವಿರುದ್ಧ ಹಲವರು ದೂರು ನೀಡಿ ಪ್ರಕರಣಗಳು ವಿಚಾರಣೆ ಹಂತದಲ್ಲಿದೆ. ನೆರೆಮನೆಯವರಿಗೆ, ಊರಿನವರಿಗೆ ನಿತ್ಯ ಕುಡಿದು ಬಂದು ಕಿರುಕುಳ ನೀಡುವ ಈತನ ವಿರುದ್ಧ ಹಲವರು ನೊಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆದರೂ ಈವರೆಗೂ ಯಾವುದೇ ಕ್ರಮವಾಗದೇ, ಈತನ ಉಪಟಳ ಮುಂದುವರಿದಿದೆ. ಪೊಲೀಸ್ರಿಗೂ ಹಲ್ಲೆ ನಡೆಸಿರುವ ಈತನ ವಿರುದ್ಧ ದೆಹಲಿ ಯೋಧರ ಅಸೋಸಿಯೇಷನ್ ನಲ್ಲಿಯೂ ಎರಡು ದೂರುಗಳು ವಿಚಾರಣಾ ಹಂತದಲ್ಲಿದೆ.

Related Posts

Leave a Reply

Your email address will not be published.