ಉಳ್ಳಾಲ : ಎಸ್‍ಡಿಪಿಐ ಅಭ್ಯರ್ಥಿಗಳನ್ನು ಬೆಂಬಲಿಸಿದ ಬಿಜೆಪಿ ಸದಸ್ಯರಿಬ್ಬರ ಉಚ್ಛಾಟನೆ

ತಲಪಾಡಿ ಗ್ರಾಮ ಪಂಚಾಯಿತಿನಲ್ಲಿ ನಡೆದ ಅಧ್ಯಕ್ಷರ ಚುನಾವಣೆಯಲ್ಲಿ ಎಸ್‍ಡಿಪಿಐ ಅಭ್ಯರ್ಥಿಗಳನ್ನು ಬೆಂಬಲಿಸಿದ ಇಬ್ಬರು ಬಿಜೆಪಿ ಬೆಂಬಲಿತ ಸದಸ್ಯರನ್ನು ಜಿಲ್ಲಾಧ್ಯಕ್ಷರ ಆದೇಶದಂತೆ ತಕ್ಷಣದಿಂದ ಪಕ್ಷದ ಚಟುವಟಿಕೆಗಳಿಂದ ಉಚ್ಛಾಟಿಸಲಾಗುವುದು ಹಾಗೂ ಮುಂದಿನ ಆರು ವರ್ಷಗಳ ಕಾಲ ಪಕ್ಷಕ್ಕೆ ಬರದಂತೆ ನಿರ್ಭಂಧಿಸಲಾಗುವುದು ಎಂದು ಮಂಗಳೂರು ಕ್ಷೇತ್ರ ಬಿಜೆಪಿ ಅಧ್ಯಕ್ಷ ಚಂದ್ರಹಾಸ್ ಪಂಡಿತ್ ಹೌಸ್ ಹೇಳಿದ್ದಾರೆ. ಅವರು ಪಂಡಿತ್ ಹೌಸ್‍ನ ಚುನಾವಣಾ ಕಾರ್ಯಾಲಯದಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಯಾವುದೇ ಪಕ್ಷದ ಬೆಂಬಲದಿಂದ ಉಪಾಧ್ಯಕ್ಷರ ಆಯ್ಕೆ ನಡೆದಿಲ್ಲ ಎಂದರು. ಇಬ್ಬರು ಬೆಂಬಲಿತ ಸದಸ್ಯರನ್ನು ಪಕ್ಷ ದ್ರೋಹ ಮತ್ತು ಅನ್ಯಾಯಕ್ಕಾಗಿ ಜಿಲ್ಲಾಧ್ಯಕ್ಷರ ಸೂಚನೆ ಮೇರೆಗೆ 6 ವರ್ಷದ ಕಾಲ ಪಕ್ಷದ ಸಾಮಾನ್ಯ ಸದಸ್ಯತ್ವದಿಂದ ಉಚ್ಛಾಟನೆ ಮಾಡಲಾಗಿದೆ. ಜಿಲ್ಲಾಧ್ಯಕ್ಷರ ಸೂಚನೆ ಮೇರೆಗೆ ಆದೇಶ ಜಾರಿಗೆ ಬರಲಿದ್ದು, ಇದನ್ನು ಘೋಷಣೆ ಮಾಡುತ್ತಿದ್ದೇವೆ ಎಂದರು.

ಜಿಲ್ಲಾ ಉಪಾಧ್ಯಕ್ಷ ಸಂತೋಷ್ ರೈ ಬೋಳಿಯಾರ್, ಜಿಲ್ಲಾ ಪ್ರ. ಕಾ ಕಸ್ತೂರಿ ಪಂಜ, ಜಿಲ್ಲಾ ಕಾರ್ಯದರ್ಶಿಗಳಾದ ರಣದೀಪ್ ಕಾಂಚನ್, ಸತೀಶ್ ಕುಂಪಲ, , ಜಯಶ್ರೀ ಕರ್ಕೇರ, ಹೇಮಂತ್ ಶೆಟ್ಟಿ, ನವೀನ್ ಪಾದಲ್ಪಾಡಿ, ತಲಪಾಡಿ ಗ್ರಾ.ಪಂ ಉಪಾಧ್ಯಕ್ಷೆ ಪುಷ್ಪಾವತಿ ಶೆಟ್ಟಿ, ತಲಪಾಡಿ ಬಿಜೆಪಿ ಅಧ್ಯಕ್ಷ ಜಿತೇಂದ್ರ ಶೆಟ್ಟಿ ತಲಪಾಡಿ ಉಪಸ್ಥಿತರಿದ್ದರು.

Related Posts

Leave a Reply

Your email address will not be published.